ಸಂಸ್ಕೃತಿ ಒಂದು ಉತ್ತಮ ನಡವಳಿಕೆ: ಶಾಸಕ ಚನ್ನಬಸಪ್ಪ

KannadaprabhaNewsNetwork |  
Published : Mar 02, 2026, 01:45 AM IST
ಪೋಟೋ: 01ಎಸ್‌ಎಂಜಿಕೆಪಿ05ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ, ಶಿವಮೊಗ್ಗ ಇವರುಗಳು ಸಂಯುಕ್ತಾಶ್ರಯದಲ್ಲಿ  ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಿಂದೂ ಮತ್ತು ಸಂಸ್ಕೃತಿ ಎಂಬುದು ಬೇರೆಯಲ್ಲ. ಸಂಸ್ಕೃತಿ ಎಂಬುದು ಒಂದು ಉತ್ತಮ ನಡವಳಿಕೆಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹಿಂದೂ ಮತ್ತು ಸಂಸ್ಕೃತಿ ಎಂಬುದು ಬೇರೆಯಲ್ಲ. ಸಂಸ್ಕೃತಿ ಎಂಬುದು ಒಂದು ಉತ್ತಮ ನಡವಳಿಕೆಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ, ಶಿವಮೊಗ್ಗ ಜಂಟಿಯಾಗಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಡೀ ಮನುಕುಲಕ್ಕೆ ತತ್ವ ಸಿದ್ಧಾಂತವನ್ನು ನೀಡಿ, ವಚನಗಳ ಮುಖಾಂತರ ಸಂಸ್ಕಾರವನ್ನು ಕೊಡುವಂತ ಕೆಲಸ ರೇಣುಕಾಚಾರ್ಯರು ಮಾಡಿದ್ದಾರೆ. ಗುರುಗಳು ಮಠಕ್ಕೆ ಸೀಮಿತವಾಗದೆ ಸಮಾಜದಲ್ಲಿ ಜಾಗೃತಿ ಮೂಡಿಸುವುದರ ಮೂಲಕ ವಿಕಾಸಗೊಳಿಸುವಂತ ಕೆಲಸ ಮಾಡಬೇಕೆಂದು ತಿಳಿಸಿದರು.

ಮಾನವೀಯತೆ ಇದ್ದರೆ ಈ ಜಗತ್ತು ಚೆನ್ನಾಗಿರುತ್ತದೆ. ಶಾಂತಿಯನ್ನು ಸಮಾಜದಲ್ಲಿ ಕಾಪಾಡಬಹುದು. ಮನುಷ್ಯನ ಮನಸ್ಸಿನಲ್ಲಿ ಪರಿಶುದ್ಧತೆ ಕಾಪಾಡಿದರೆ ಧರ್ಮದಲ್ಲಿ ವ್ಯತ್ಯಾಸವಿರದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಇಂತಹ ಮಹಾನ್ ವ್ಯಕ್ತಿಗಳ ಜಯಂತಿ ಒಂದು ಸಮಾಜಕ್ಕೆ ಸೀಮಿತವಾಗಿರದೆ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಆಚರಣೆ ಮಾಡಿದರೆ ಅವರ ತತ್ವಗಳು, ಸಂದೇಶಗಳು ಪ್ರತಿಯೊಬ್ಬರಿಗೆ ಮುಟ್ಟುತ್ತದೆ ಎಂದು. ಜನರು ಧರ್ಮಶ್ರದ್ಧೆ ಮತ್ತು ನಿಷ್ಠೆಯಿಂದ ಸಮಾಜದಲ್ಲಿ ಇರಬೇಕು ಎಂದರು.

ಜ್ಞಾನದೀಪ ಶಾಲೆಯ ಕನ್ನಡ ಉಪನ್ಯಾಸಕ ತುರುವನೂರು ಎಂ.ವಿ.ಮಲ್ಲಿಕಾರ್ಜುನ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಾನವಧರ್ಮ ಶೇಷ್ಠ ವಾದದ್ದು ಎಂದು ಸಮಾಜಕ್ಕೆ 8 ನೇ ಶತಮಾನದಲ್ಲಿ ಮಠಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ಸಾರಿದ್ದರು. ದೇವರನ್ನು ದೇವಾಲಯಗಳಲ್ಲಿ ಹುಡುಕುವುದಕ್ಕಿಂತ ನಿಮ್ಮ ಮನಸ್ಸಿನಲ್ಲಿ ಹುಡುಕಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಜ್ಯೋತಿ ಪ್ರಕಾಶ್, ಜಂಗಮ ಸಮಾಜದ ಜಿಲ್ಲಾಧ್ಯಕ್ಷರು ಚಂದ್ರಯ್ಯ, ಬೇಡ ಜಂಗಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಬಿ. ಮಲ್ಲಿಕಾರ್ಜುನಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಉಮೇಶ್, ಸಮಾಜದ ಹಿರಿಯ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದುಬೈನಲ್ಲಿ ಸಿಲುಕಿದ ಅರಸೀಕೆರೆ ಮತ್ತು ಅಂಗಡಿಹಳ್ಳಿ ಜನರು
ಶ್ರೀ ರೇಣುಕಾಚಾರ್ಯ, ಪಂಚಾಚಾರ್ಯರ ಸ್ಮರಿಸಿದರೆ ಪಾಪ ನಾಶ: ಶಿವಕುಮಾರ ಸ್ವಾಮಿ