ಮಕ್ಕಳನ್ನು ಉತ್ತಮ ಶಾಲೆಯಲ್ಲಿ ಓದಲು ದಾಖಲಿಸಿದರೆ ಸಾಲದು. ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ಅವರ ಪ್ರತಿಭೆಗೆ ನೀರೆರೆಯಬೇಕು.
ಶಿರಹಟ್ಟಿ: ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ. ಯಾವುದೇ ಸಮಾಜದ ಏಳ್ಗೆಗೆ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಮುಖ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಸಂಸ್ಕಾರವೂ ಅಷ್ಟೇ ಮುಖ್ಯವಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ತಿಳಿಸಿದರು.ಶನಿವಾರ ಸಂಜೆ ಪಟ್ಟಣದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ೨೦೨೫- ೨೬ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳನ್ನು ಉತ್ತಮ ಶಾಲೆಯಲ್ಲಿ ಓದಲು ದಾಖಲಿಸಿದರೆ ಸಾಲದು. ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ಅವರ ಪ್ರತಿಭೆಗೆ ನೀರೆರೆಯಬೇಕು. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಓದಿಸಬೇಕು. ಒಬ್ಬ ತಾಯಿ ಪ್ರಪಂಚ ನಿಬ್ಬೆರಗಾಗುವಂತೆ ಮಾಡುವ ಮನಸ್ಸನ್ನು ಮಕ್ಕಳ ಮೂಲಕ ತೋರಿಸಬಹುದು. ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು ಎಂದರು.ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಕಡ್ಲಿಕೊಪ್ಪ ಮಾತನಾಡಿ, ಮಗು- ತಂದೆ- ತಾಯಿ ಮತ್ತು ಶಿಕ್ಷಕರ ನಡುವೆ ಭಾವನಾತ್ಮಕ ಸಂಬಂಧ ಬೆಳೆಯಲು ಶಾಲೆಯಲ್ಲಿ ಅನೇಕ ಬಗೆಯ ರಚನಾತ್ಮಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ಮಕ್ಕಳ ಬೆಳವಣಿಗೆಯಲ್ಲಿ ಇವರೆಲ್ಲರ ಪಾತ್ರ ಬಹಳ ದೊಡ್ಡದು. ಶಿಕ್ಷಣ ಇಂದು ಸರಕಿನ ವಸ್ತುವಾಗುತ್ತಿರುವುದು ಖೇದಕರ ಸಂಗತಿ. ಕೆಲವು ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲಿ ಅನಕ್ಷರತೆಯನ್ನು ಅಳಿಸಿ ಹಾಕಿ ಸ್ವಸ್ಥ ಸಮಾಜ ನಿರ್ಮಿಸಲು ಶ್ರಮಿಸುತ್ತಿವೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಸುಖಲತಾ ಸಾಮ್ರಾಟ್ ನೇತೃತ್ವದಲ್ಲಿ ಶಿಕ್ಷಕಿಯರಾದ ಕವಿತಾ ಕಾಶಪ್ಪ ಸ್ವಾಮಿ, ಪಲ್ಲವಿ ಫಕ್ಕೀರೇಶ ಸ್ವಾಮಿ ಹಾಗೂ ಇತರರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಎಸ್.ಎಸ್. ಸಾಮ್ರಾಟ್ ಅಧ್ಯಕ್ಷತೆ ವಹಿಸಿದ್ದರು. ಪಾಸ್ಟರ್ ಅಭಿನವ ಪಾಲ್, ಪಾಸ್ಟರ್ ರಾಜು ಮಳಗೇರಿ ಕ್ರಿಸ್‌ಮಸ್ ಸಂದೇಶ ಹೇಳಿದರು. ಪಪಂ ಮಾಜಿ ಸದಸ್ಯ ಹೊನ್ನಪ್ಪ ಶಿರಹಟ್ಟಿ, ಸಂದೀಪ ಕಪ್ಪತ್ತನವರ, ಮಂಜು ಘಂಟಿ, ದೇವಪ್ಪ ಬಟ್ಟೂರ, ಎಚ್.ಆರ್. ಬೆನಹಾಳ, ಅಜ್ಜು ಪಾಟೀಲ, ಮುತ್ತು ಮಜ್ಜಗಿ, ಮಾಬೂಬಸಾಬ ಲಕ್ಷ್ಮೇಶ್ವರ, ಆನಂದ ಕೋಳಿ, ಅಕ್ಬರ್‌ಸಾಬ ಯಾದಗಿರಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.