ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ಸೋಂಪುರ ಹೋಬಳಿಯ ಮೇಲಣಗವಿ ಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಿವಗಂಗಾಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ದೇವರಲ್ಲಿ, ಗುರುಗಳಲ್ಲಿ ನಂಬಿಕೆಯಿಟ್ಟಾಗ ಕಷ್ಟ- ಕಾರ್ಪಣ್ಯಗಳು ನಿವಾರಣೆಯಾಗುತ್ತವೆ. ಈ ಬಗ್ಗೆ ನನಗೆ ಸ್ವಂತ ಅನುಭವವಾಗಿದೆ. ವಿಭೂತಿಯನ್ನು ಪ್ರತಿಯೊಬ್ಬರೂ ಧರಿಸಬೇಕು. ವಿಭೂತಿ ಒಬ್ಬರಿಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚೆಗೆ ಜಾತಿ ಜಾತಿಗಳ ನಡುವೆ ವೈಷಮ್ಯ ಹೆಚ್ಚಾಗುತ್ತಿದೆ, ಮನುಷ್ಯನಿಗೆ ಜಾತಿ ಮುಖ್ಯವಲ್ಲ, ಸಂಸ್ಕಾರ ಮುಖ್ಯವಾಗಿದ್ದು, ಗುರುವಿನ ಗುಲಾಮನಾದರೆ ಮೋಕ್ಷ ಪಡೆಯಲು ಸಾಧ್ಯ ಎಂದರು.ಪ್ರಶಸ್ತಿಗಳನ್ನು ನಾವು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿಗಳೇ ನಮ್ಮನ್ನು ಹುಡುಕಿಕೊಂಡು ಬಂದಾಗ ಪ್ರಶಸ್ತಿಯ ಮೌಲ್ಯ ಹೆಚ್ಚಾಗುತ್ತದೆ. ನನಗೆ ಸಿಕ್ಕಿರುವ ಈ ಪ್ರಶಸ್ತಿಯನ್ನು ನನಗೆ ಜನ್ಮನೀಡಿದ ತಾಯಿಗೆ ಅರ್ಪಿಸುತ್ತೇನೆ. ನಮ್ಮನ್ನು ಹೆತ್ತ ತಂದೆ- ತಾಯಿಗೆ ಋಣಿಯಾಗಿರಬೇಕು. ಅವರನ್ನು ಸಾಕಿ ಸಲುಹಿದಾಗ ಮಾತ್ರ ನಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.
ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಮೇಲಣಗವಿ ಮಠದ ಶ್ರೀಗಳು ತಮ್ಮಲ್ಲಿರುವ ಜ್ಞಾನವನ್ನು ದೇಶ- ವಿದೇಶಗಳಲ್ಲಿ ಪಸರಿಸಿ ಸಮಾಜದ, ಧರ್ಮದ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರತಿವರ್ಷವೂ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ ಶಿವಗಂಗಾ ಪ್ರಶಸ್ತಿ ನೀಡುವುದರ ಮೂಲಕ ಪ್ರಶಸ್ತಿ ಮೌಲ್ಯ ಹೆಚ್ಚಿಸುತ್ತಿದ್ದಾರೆ. ಚಿತ್ರನಟ ದೊಡ್ಡಣ್ಣ ಅವರಿಗೆ ಶಿವಗಂಗಾಶ್ರೀ ಪ್ರಶಸ್ತಿ ನೀಡಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ. ದೊಡ್ಡಣ್ಣನವರಿಗೆ ಹೆಸರಿಗೆ ತಕ್ಕಂತೆ ನಡೆ- ನುಡಿಯಲ್ಲಿಯೂ ದೊಡ್ಡತನ ಇದೆ. ಪ್ರತಿ ವರ್ಷ ಮಠದಲ್ಲಿ ಎಲ್ಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುತ್ತಾ ಬರುತ್ತಿದ್ದಾರೆ ಎಂದರು.
ಗೌರಿಗದ್ದೆ ಆಶ್ರಮದ ಡಾ.ವಿನಯ್ ಗುರೂಜಿ ಮಾತನಾಡಿ, ಸೃಷ್ಟಿ ಇರುವುದು ಎಷ್ಟು ಸತ್ಯವೋ, ಸೃಷ್ಟಿಕರ್ತ ಇರುವುದು ಅಷ್ಟೇ ಸತ್ಯ. ನಮ್ಮ ಪುಣ್ಯಭೂಮಿಯಲ್ಲಿ ಶಿವಯೋಗಿಗಳ ತಪಸ್ಸಿನ ಫಲವಾಗಿ ಶಾಂತಿ ನೆಲೆಸಿದೆ. ಗುರುವಿನ ಶಕ್ತಿ ನಾಶ ಮಾಡಲು ಯಾವುದೇ ದುಷ್ಟಶಕ್ತಿಗಳಿಗೂ ಸಾಧ್ಯವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಕಾಡಸಿದ್ಧೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಡೋಣೂರು ಚಾನುಕೋಟಿ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀರಂಗಪಟ್ಟಣ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗೀಶ್ವರ ಸ್ವಾಮೀಜಿ, ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಮಠಾಧೀಶರು, ಅಭಾವಿಲೀಂ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜಿಲ್ಲಾಧ್ಯಕ್ಷೆ ರಾಜಮ್ಮ, ತಾಲೂಕು ಅಧ್ಯಕ್ಷೆ ವೇದಾವತಿ, ಜಿಲ್ಲಾ ಸಂಘದ ಅಧ್ಯಕ್ಷ ರೇವಣಸಿದ್ದಯ್ಯ, ಮಾಜಿ ಅಧ್ಯಕ್ಷರುಗಳಾದ ನಟರಾಜು, ಉಮಾಶಂಕರ್, ಹೊನ್ನಗಂಗಶೆಟ್ಟಿ, ಜಗದೀಶ್, ಅಣ್ಣಪ್ಪ, ಕೋಟ್ರೇಶ್ ಮತ್ತಿತರರು ಉಪಸ್ಥಿತರಿದ್ದರು.
ಪೋಟೋ 3: ಸೋಂಪುರ ಹೋಬಳಿಯ ಮೇಲಣಗವಿ ವೀರಸಿಂಹಾಸನ ಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಚಿತ್ರನಟ ದೊಡ್ಡಣ್ಣ ಸೇರಿ ಗಣ್ಯರು ಉದ್ಘಾಟಿಸಿದರು.