ಕನ್ನಡಪ್ರಭ ವಾರ್ತೆ ಸಿಂದಗಿ:
ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪ.ಪೂ ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ ಜರುಗಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದು ಸಂಸ್ಕೃತಿಯ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿದೆ. ಅದು ಭಾರತದಲ್ಲಿ ಆಡಂಬರವಾಗುತ್ತಿದೆ. ಶಿಕ್ಷಣ ಇಲಾಖೆಗಳು ನಡೆಸುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾಯಕ ಸಂಸ್ಕೃತಿಯನ್ನು ಅರ್ಥೈಸಬೇಕು. ನಾವು ದುಡಿಮೆಗೆ ಹೆಚ್ಚು ಮಹತ್ವ ನೀಡಿದ್ದಲ್ಲಿ ಮಕ್ಕಳಲ್ಲಿ ಸ್ವಾವಲಂಬನೆ ಗುಣ ಮೂಡಲಿದೆ ಎಂದರು.ಈ ವೇಳೆ ಕನ್ನೂರ ಸರ್ಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಎಲ್.ಆರ್.ಹಳ್ಳದಮನಿ ಮಾತನಾಡಿ, ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು ಅದರ ಜೊತೆಗೆ ಸಂಸ್ಕಾರ, ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚು ಉತ್ಸಾಹವನ್ನು ತುಂಬಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಮಾನಸಿಕ ಶಕ್ತಿ ವೃದ್ಧಿಸುತ್ತವೆ ಎಂದರು.ಈ ವೇಳೆ ಜಿಲ್ಲಾ ನೌಕರ ಸಂಘದ ಕಾರ್ಯಕಾರಣಿ ನಿರ್ದೇಶಕರಾಗಿ ಆಯ್ಕೆಯಾದ ಪ.ಪೂ ಶಿಕ್ಷಣ ಇಲಾಖೆ ವಿಜಯಪುರ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ, ಎಲ್.ಆರ್.ಹಳ್ಳದಮನಿ, ರಾಜಶೇಖರ ಕೂಚಬಾಳ ಅವರಿಗೆ ಸನ್ಮಾನಿಸಲಾಯಿತು.ಸಂಸ್ಥೆಯ ನಿರ್ದೇಶಕ ಶಂಕರಗೌಡ ಪಾಟೀಲ ಯಂಕಂಚಿ, ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ಹೆಬ್ಬಿ, ಪ್ರಾಚಾರ್ಯ ಮಹಾಮಂಡಳಿ ವಿಜಯಪುರದ ಕಾರ್ಯದರ್ಶಿ ಕೆ.ಎ.ಉಪ್ಪಾರ, ಕೂಡಗಿ ಸರ್ಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಕೆ.ಜಿ.ಲಮಾಣಿ, ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಗಂಗನಳ್ಳಿ, ಪದ್ಮರಾಜ ಮಹಿಳಾ ಪ.ಪೂ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಹಯ್ಯಾಳಕರ, ಅಂಜುಮನ್ ಪ.ಪೂ ಕಾಲೇಜಿನ ಪ್ರಾಚಾರ್ಯ ಎ.ಬಿ.ಕುಚೇಲ, ಆರ್.ಡಿ.ಪಾಟೀಲ ಕಾಲೇಜಿನ ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ವೇದಿಕೆ ಮೇಲಿದ್ದರು.ವಿಜಯಪುರ ಜಿಲ್ಲೆಯ ವಿವಿಧ ಪ.ಪೂ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿ ಕಾಶಿಬಾಯಿ ಮಾಶ್ಯಾಳ ಪ್ರಾರ್ಥಿಸಿದರು, ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು, ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ವಂದಿಸಿದರು.