ಅನಂತ್ ಶಾಲಾ ವಾರ್ಷಿಕೋತ್ಸವ
ಮಕ್ಕಳು ಹಣ ಸಂಪಾದನೆಯ ಯಂತ್ರಗಳಲ್ಲ, ಪೋಷಕರು ಮುಂದಿನ ತಮ್ಮ ಭವಿಷ್ಯಕ್ಕಾಗಿ ಮಕ್ಕಳನ್ನು ಬೆಳಸದೇ ದೇಶದ ಭವಿಷ್ಯಕ್ಕಾಗಿ ಮಕ್ಕಳನ್ನು ಸಿದ್ಧಗೊಳಿಸಿ. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಸುಸಂಸ್ಕೃತರಾದರೆ ಮಾತ್ರ ವಿದ್ಯೆಗೆ ಬೆಲೆ ಎಂದು ನಾಡೋಜ ಡಾ. ವೂಡೇ ಪಿ.ಕೃಷ್ಣ ಹೇಳಿದರು
ನಗರದ ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿ ಈ ಶಾಲೆಯು ಮಕ್ಕಳಲ್ಲಿ ಸಂಸ್ಕೃತಿಯನ್ನು ಬಿತ್ತುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿಜ್ಞಾನಿಗಳಾದ ಪ್ರಾಪ್ತಿ ಮಿತ್ತಲ್ ಅವರು ಚಂದ್ರಯಾನ-೩ ರ ಸಾಧನೆಯ ವಿಚಾರಧಾರೆಯನ್ನು ಮಕ್ಕಳೊಂದಿಗೆ ಹಂಚಿಕೊಂಡರು.ಅನಂತ್ ಇಂಟರ್‌ನ್ಯಾಷನಲ್ ಶಾಲೆಯ ಅಧ್ಯಕ್ಷ ಆರ್ ಅನಂತಕುಮಾರ್ ಮಾತನಾಡಿ ಮಕ್ಕಳಿಗೆ ಒತ್ತಡದೊಂದಿಗೆ ವಿದ್ಯಾಭ್ಯಾಸ ಮಾಡಿಸದೆ ಆಸಕ್ತಿಯುತ ಕಲಿಕೆಗೆ ಒತ್ತು ನೀಡುವ ಉದ್ದೇಶದಿಂದ ಹಲವಾರು ಪಠ್ಯಪೂರಕ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದೇವೆ. ಅದರಲ್ಲಿ ಸಾಧನೆಗೈದ ಮಕ್ಕಳನ್ನು ಬಹುಮಾನ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ನಾವು ಶ್ರಮಿಸಲು ಸದಾ ಸಿದ್ಧ ಎಂದು ತಿಳಿಸಿದರು.