ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಎಸ್ಸಿ, ಎಸ್ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ-ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ತಿಳಿಸಿದರು.
ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ದಾಖಲೆ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ನಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು. ಈಗಾಗಲೇ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಅನುದಾನ ಬಾಕಿ ಉಳಸಿಕೊಳ್ಳಬಾರದು ಎಂದು ಸೂಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.