ಮೌನೇಶ ವಿಶ್ವಕರ್ಮ
ಕಳೆದ 25 ವರ್ಷಗಳಿಂದ ಶೋಚನೀಯ ಸ್ಥಿತಿಯಲ್ಲಿರುವ ತನ್ನೂರಿನ ಶಾಪಗ್ರಸ್ತ ರಸ್ತೆಗೆ ಮುಕ್ತಿ ಕೊಡಿಸಿ ಎಂದು ಯಕ್ಷಗಾನ ಹಿಮ್ಮೇಳ ಕಲಾವಿದರೊಬ್ಬರು ಮಾನವಹಕ್ಕು ಆಯೋಗದ ಮೊರೆ ಹೋದ ಘಟನೆ ತಾಲೂಕಿನ ಗಡಿಗ್ರಾಮವಾದ ಕರೋಪಾಡಿಯಲ್ಲಿ ನಡೆದಿದೆ.
ಯಕ್ಷಗಾನದ ಹಿಮ್ಮೇಳದಲ್ಲಿ ಸಕ್ರಿಯರಾಗಿರುವ ಹನುಮಗಿರಿ ಮೇಳದ ಕಲಾವಿದ ಚೈತನ್ಯ ಕೃಷ್ಣ ಪದ್ಯಾಣ ದೂರುದಾರ. ರಸ್ತೆ ದುರಸ್ತಿಗೆ ಹಲವು ವರ್ಷಗಳಿಂದ ಶಾಸಕರಾದಿಯಾಗಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಬೇಸತ್ತಿರುವ ಇವರು, ಇದು ತನ್ನ ಕೊನೇ ಪ್ರಯತ್ನ ಎಂದು ಪತ್ರದಲ್ಲಿ ತಿಳಿಸಿದ್ದಾರೆ.ಏನಿದು ಸಮಸ್ಯೆ?: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಸುಮಾರು 1.5 ಕಿ.ಮೀ. ದೂರದಲ್ಲಿರುವ ಮುಗುಳಿ - ಪದ್ಯಾಣ (ರೆಂಜೆಡಿ) ರಸ್ತೆಯು ಈ ಹಿಂದೆ 1999ರಲ್ಲಿ ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ನಿರ್ಮಾಣಗೊಂಡಿದೆ. ಆದರೆ ಬಳಿಕದ ವರ್ಷಗಳಲ್ಲಿ ಹಂತ ಹಂತವಾಗಿ ಇದ್ದ ಡಾಂಬರು ಕಿತ್ತುಹೋಯಿತೇ, ವಿನಃ ಅದರ ಜೀರ್ಣೋದ್ಧಾರದ ಕೆಲಸ ನಡೆಯಲೇ ಇಲ್ಲ. ಹೀಗಾಗಿ ಪ್ರಸ್ತುತ ಈ ರಸ್ತೆಯ ಸ್ಥಿತಿ ತೀವ್ರ ಶೋಚನೀಯವಾಗಿದೆ.
ಇದೇ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾಮಕ್ಕಳು ಸಂಚರಿಸುತ್ತಿದ್ದು, ದ್ವಿಚಕ್ರವಾಹನಗಳು ಇಲ್ಲಿ ಅವಘಡಕ್ಕೆ ಒಳಗಾದ ಘಟನೆಯೂ ನಡೆದಿದೆ. ಈ ರಸ್ತೆಯಿಂದಾಗಿ ದುರದೃಷ್ಟವಶಾತ್ ಸುಮಾರು 10-15 ಮನೆಗಳ ಜನರು ತಮ್ಮ ಮನೆಗಳಿಗೆ ರಸ್ತೆ ಸಂಪರ್ಕವಿಲ್ಲದೇ ತಮ್ಮ ಜೀವವನ್ನು ಪಣಕ್ಕಿಟ್ಟು ಎಲ್ಲ ಕೆಲಸಗಳಿಗೆ ಈ ರಸ್ತೆಯ ಮೂಲಕ ಪ್ರತಿದಿನ ಸಂಚರಿಸಬೇಕಾಗಿದೆ. ಈಗಾಗಲೇ. ಹಲವು ದ್ವಿಚಕ್ರ ವಾಹನಗಳು ಮುಗ್ಗರಿಸಿ ಕೆಳಗೆ ಬಿದ್ದಿದ್ದು, ಸವಾರರು ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಲ್ಲಿನ ಮನೆಗಳಿಗೆ ಮೂಲಭೂತ ಅಗತ್ಯಗಳನ್ನು ತಂದುಕೊಡುವುದಕ್ಕೂ ಕೆಲವರು ಹಿಂದೇಟು ಹಾಕುತ್ತಿದ್ದಾರೆ ಎನ್ನುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆಯುತ್ತಿರುವುದು ಸಾಮಾನ್ಯ ವ್ಯಕ್ತಿಗಳ ಕೊನೆಯ ಪ್ರಯತ್ನವಾಗಿದ್ದು, ಅದರಂತೆ ಪತ್ರ ಬರೆದಿದ್ದೇನೆ, ರಸ್ತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಪಡೆದುಕೊಂಡು ರಸ್ತೆ ಸುರಕ್ಷತೆಯ ಹಕ್ಕು ನಮ್ಮ ಗ್ರಾಮದ ನಿವಾಸಿಗಳಿಗೆ ದೊರಕುವಂತೆ ಮಾಡುವಿರಿ ಎಂಬ ನಂಬಿಕೆಯಲ್ಲಿ ನಾವಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.
ಶಾಸಕರಿಂದ ಸ್ಪಂದನೆ ಇಲ್ಲ...ರಸ್ತೆಯ ದುಃಸ್ಥಿತಿಯ ಬಗ್ಗೆ ‘ಕನ್ನಡಪ್ರಭ’ದ ಜೊತೆ ಮಾತನಾಡಿದ ಸ್ಥಳೀಯರಾದ ಶಿವರಾಮ ಭಟ್ ಪದ್ಯಾಣ ಅವರು, ರಸ್ತೆಯನ್ನು ಸರಿ ಮಾಡಿಕೊಡಿ ಎಂದು ಶಾಸಕರಿಗೆ ಮತ್ತು ಗ್ರಾಮ ಪಂಚಾಯಿತಿಗೆ ಅಧಿಕೃತವಾಗಿ ಅರ್ಜಿ ಪತ್ರಗಳನ್ನು ನೀಡಲಾಗಿದೆ. ಹಲವಾರು ಬಾರಿ ಅನಧಿಕೃತವಾಗಿ ಮೌಖಿಕವಾಗಿ ಹಲವಾರು ಮನವಿಗಳನ್ನು ಮಾಡಿದ್ದರೂ ಶಾಸಕರಿಂದ ಯಾವ ಸ್ಪಂದನೆ ಬಂದಿಲ್ಲ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆಯೋಗದಿಂದ ಸ್ಪಂದನೆ