ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಿ

KannadaprabhaNewsNetwork |  
Published : Jun 25, 2025, 01:18 AM IST
24ಕೆಪಿಎಲ್27 ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ಮನವಿ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿಧೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ಈ ಪೈಕಿ ಹಿರೇಸಿಂದೋಗಿ ಬಳಿ ಈಚೆಗೆ ದಾಳಿ ನಡೆಸಿ, ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ.

ಕೊಪ್ಪಳ:

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿ, ಆಗ್ರಹಿಸಿದೆ.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಹಾಗೂ ಎಸ್ಪಿ ಕಚೇರಿಯಲ್ಲಿ ಎಸ್ಪಿ ಡಾ. ರಾಮ ಎಲ್. ಅರಸಿದ್ದಿ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು, ಕೂಡಲೇ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ, ಇಲ್ಲದಿದ್ದರೇ ನಿಸರ್ಗದ ಸಂಪತ್ತು ವ್ಯಾಪಕ ಪ್ರಮಾಣದಲ್ಲಿ ಹಾಳಾಗಲಿದೆ ಎಂದು ಕಿಡಿಕಾರಿದರು.

ಕಳೆದ ಹಲವು ತಿಂಗಳಿಂದ ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿಧೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ಈ ಪೈಕಿ ಹಿರೇಸಿಂದೋಗಿ ಬಳಿ ಈಚೆಗೆ ದಾಳಿ ನಡೆಸಿ, ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ. ಇದೇ ರೀತಿ ಉಳಿದೆಡೆ ದಾಳಿ ನಡೆಸಿ ದಂಧೆಕೋರರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಈ ವೇಳೆ ವಿಪ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ದಢೇಸೂಗುರು, ರಾಜ್ಯಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ್ ಕ್ಯಾವಟರ್, ಚಂದ್ರಶೇಖರ ಕವಲೂರ, ಕೊಪ್ಪಳ ಗ್ರಾಮೀಣ ಮಂಡಲ ಅಧ್ಯಕ್ಷ ಪ್ರದೀಪ್ ಹಿಟ್ನಾಳ್, ನಗರ ಮಂಡಲ ಅಧ್ಯಕ್ಷ ರಮೇಶ ಕವಲೂರ, ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಗಣೇಶ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಹೆಸರೂರ, ಉಮೇಶ ಹಿರೇಮಠ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ವಾಣಿಶ್ರೀ ಹಿರೇಮಠ, ಕೀರ್ತಿ ಪಾಟೀಲ್ ಉಪಸ್ಥಿತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಮಹತ್ವ ತಿಳಿದುಕೊಳ್ಳಲಿ: ಅಪರ ಜಿಲ್ಲಾಧಿಕಾರಿ
ಸ್ಮಶಾನದ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಲು ಆಗ್ರಹ