ಕನ್ನಡಪ್ರಭ ವಾರ್ತೆ ಹಲಗೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳು ತಲೆಎತ್ತಿ ನಿಂತಿವೆ.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವ ಹಿನ್ನೆಲೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪಿ.ಎಂ.ನರೇಂದ್ರಸ್ವಾಮಿ ಅವರ ಕಟೌಟ್‌ಗಳು ರಾರಾಜಿಸುತ್ತಿವೆ.ಜಲಮಂಡಳಿಯ ಆವರಣದ ಒಳಗೆ ಹಸಿರು ತೋರಣದಿಂದ ಸಿಂಗರಿಸಿ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಮಿಳುನಾಡಿನಲ್ಲಿ ಚಂಡಮಾರುತದ ವಾತಾವರಣ ಇರುವುದರಿಂದ ಇಂದು ಸಹ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ನೀರು ಸುರಿಯದಂತೆ ಸುಧಾರಿತವಾಗಿ ವೇದಿಕೆಯನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಆರಾಮವಾಗಿ ಕುಳಿತು ಮುಖ್ಯಮಂತ್ರಿಗಳ ಭಾಷಣವನ್ನು ಕೇಳಬಹುದಾಗಿದೆ.