ಕನ್ನಡಪ್ರಭ ವಾರ್ತೆ ಕುಶಾಲನಗರ
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವು ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್ ಮೂಲಕ ರಾಜ್ಯ ಪರ್ಯಟನೆ ಕೈಗೊಂಡಿರುವ ಮಹಾಲಿಂಗಯ್ಯ ಮಾತನಾಡಿ, ನಾವು ಗಿಡ- ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯೊಂದಿಗೆ ದೇಶವನ್ನು ಹಸಿರಿನಿಂದ ಸಮೃದ್ಧಗೊಳಿಸಿ ಕಂಗೊಳಿಸುವುದು ಸೇರಿದಂತೆ ರಾಜ್ಯದಲ್ಲಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮನವಿ ಮಾಡಿದರು.
ಬೈಸಿಕಲ್ ಜಾಥಾದ ಮೂಲಕ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಹಾಲಿಂಗಯ್ಯ ಅವರು ಬುಧವಾರ ಬೆಳಗ್ಗೆ ಕೊಡಗು ಸಂಚಾರ ಪೂರೈಸಿ ಮೈಸೂರು ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಕುಶಾಲನಗರದಲ್ಲಿ ಪ್ರವಾಸಿ ಮಂದಿರದ ಬಳಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಜತೆಗೆ ಪ್ರತಿ ಗ್ರಾಮ ಮತ್ತು ಊರುಗಳಲ್ಲಿಯೂ ಕೆರೆಗಳನ್ನು ಉಳಿಸಿ ಅಲ್ಲಿ ಹಸಿರು ಪರಿಸರ ನಿರ್ಮಿಸಿ ಪಕ್ಷಿ - ಸಂಕುಲಗಳ ಸಂರಕ್ಷಣೆಗೆ ಮನವಿ ಮಾಡಲಾಗುತ್ತಿದೆ. ಜಾಥಾದ ಸಂದರ್ಭದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಲಾಗುತ್ತಿದೆ ಎಂದರು.
ಪರಿಸರ ಪ್ರೇಮಿ ಮಹಾಲಿಂಗಯ್ಯ ಅವರ ಬೈಸಿಕಲ್ ಜಾಥಾದ ಪರಿಸರ ಕಾಳಜಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟ
ಜಾಥಾವು ಶ್ಲಾಘನೀಯ:
ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಉತ್ತಮ ಉದ್ದೇಶದೊಂದಿಗೆ ಕೈಗೊಂಡಿರುವ ಬೈಸಿಕಲ್ ಜಾಥಾ ಯಶಸ್ವಿಯಾಗಲಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ನಾಗೇಶ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹೇಂದ್ರ ಶುಭ ಕೋರಿದರು.
*ಅಪರ ಜಿಲ್ಲಾಧಿಕಾರಿಗೆ ಮನವಿ*
ತುಮಕೂರಿನಿಂದ ಮೂರು ತಿಂಗಳ ಹಿಂದೆ ಆರಂಭವಾಗಿರುವ ಇವರ ಸೈಕಲ್ ಯಾತ್ರೆಯು ಇಂದಿಗೆ 100 ದಿನಗಳಾಗಿದ್ದು,
ತುಮಕೂರಿನಿಂದ ಸೈಕಲ್ ಜಾಥಾ ಆರಂಭಿಸಿ ಈಗಾಗಲೇ ರಾಜ್ಯದ 23 ಜಿಲ್ಲೆಗಳಲ್ಲಿ ಬೈಸಿಕಲ್ ಜಾಥಾ ನಡೆಸಲಾಗಿದೆ. ಇದೀಗ ಕೊಡಗಿನಿಂದ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಕೈಗೊಂಡು ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ವಿಧಾನ ಸೌಧ ಬಳಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶವಿದೆ.
ಆ. 15 ರ ನಂತರ ಉಳಿದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಾಥಾ ಕೈಗೊಳ್ಳಲಾಗುವುದು ಎಂದು ಮಹಾಲಿಂಗಯ್ಯ ತಿಳಿಸಿದರು.