ದೊಡ್ಡಬಳ್ಳಾಪುರ: ಎನ್‌ಸಿಸಿ ದಿನದ ಅಂಗವಾಗಿ ಇಲ್ಲಿನ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಿಂದ ತಾಲೂಕಿನ ಹುಲುಕುಡಿ ಬೆಟ್ಟದವರೆಗೆ ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಈ ವೇಳೆ ಮಾತನಾಡಿದ ಕ್ಯಾಪ್ಟನ್ ಶ್ರೀನಿವಾಸ್, ವಿದ್ಯಾರ್ಥಿ ಜೀವನವನ್ನು ಕೇವಲ ಓದಿಗೆ ಸೀಮಿತಗೊಳಿಸದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವಗಳನ್ನು ಹೆಚ್ಚಿಸಿಕೊಂಡು ಉನ್ನತ ಚಿಂತನೆಯನ್ನು ಬೆಳಿಸಿಕೊಳ್ಳಬೇಕು ಎಂದು ಹೇಳಿದರು.
ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಜೊತೆಗೆ ಶಿಸ್ತು, ಸಂಯಮವನ್ನು ರೂಪಿಸುತ್ತದೆ. ಹಾಗಾಗಿ ಎನ್‌ಸಿಸಿ ವಿದ್ಯಾರ್ಥಿಯ ಬದುಕಿನಲ್ಲಿ ಆಶಾ ಭಾವನೆ ಮೂಡಿಸಲು ಸಹಕಾರಿಯಾಗಿದೆ. ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯ ಎಂದರು.ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಶಿವಶಂಕರ್ ಮಾತನಾಡಿ, ಬೈಸಿಕಲ್ ಜಾಥಾದ ಮಹತ್ವವನ್ನು ತಿಳಿಸಿದರು. ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.
29ಕೆಡಿಬಿಪಿ1- ಎನ್‌ಸಿಸಿ ದಿನದ ಅಂಗವಾಗಿ ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಹುಲುಕುಡಿ ಬೆಟ್ಟಕ್ಕೆ ಸೈಕ್ಲಿಂಗ್ ನಡೆಸಿದರು.