ಜಮಖಂಡಿ: ಸೈಕಲ್‌ಗೆ ಬೈಕ್ ಡಿಕ್ಕಿಯಾಗಿ ಸೈಕಲ್ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಆಲಗೂರು ಗ್ರಾಮದ ನಿವಾಸಿ ಲಕ್ಷ್ಮಣ ಖಿದ್ರಾಪೂರ (65) ಮೃತ ವ್ಯಕ್ತಿ. ಸೈಕಲ್ ಮೇಲೆ ಹೊರಟಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ, ಗ್ರಾಮೀಣ ಪಿಎಸ್‌ಐ ಗಂಗಾಧರ ಪೂಜೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.