ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗೊಳಿಸುತ್ತಿರುವ ಸರ್ಕಾರ

KannadaprabhaNewsNetwork |  
Published : Mar 11, 2025, 12:48 AM IST
61 | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಶಕ್ತಿ ಯೋಜನೆ ಮುಖಾಂತರ ಮಹಿಳೆಯರು ಉಚಿತವಾಗಿ ಎಲ್ಲೆಂದರಲ್ಲಿ ಪ್ರಯಾಣ

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗೊಳಿಸುತ್ತಿರುವ ಸರ್ಕಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣೇಗೌಡ ಹೊಸಹಳ್ಳಿ ಹೇಳಿದರು.ಪಟ್ಟಣದ ಡಿ. ದೇವರಾಜ ಅರಸು ಕಲಾಭವನದಲ್ಲಿ ಚೈತನ್ಯ ಚಾರಿಟಬಲ್ ಟ್ರಸ್ಟ್ ಹೌಸಿಂಗ್ ಬೋರ್ಡ್ ವತಿಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಶಕ್ತಿ ಯೋಜನೆ ಮುಖಾಂತರ ಮಹಿಳೆಯರು ಉಚಿತವಾಗಿ ಎಲ್ಲೆಂದರಲ್ಲಿ ಪ್ರಯಾಣ ಮಾಡಿ ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ ಹಾಗೂ ಈಗ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಗೃಹಲಕ್ಷ್ಮಿ ಯೋಜನೆ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಪ್ರತಿತಿಂಗಳು 2 ಸಾವಿರ ರು. ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡುತ್ತಿರುವುದು ಮಹಿಳೆಯರಿಗೆ ಆರ್ಥಿಕವಾಗಿ ಸಬಲತೆ ಹೊಂದಲು ಸಾಧ್ಯವಾಗಿದೆ ಎಂದರು.ಮಂಡ್ಯ ಧರ್ಮ ಕ್ಷೇತ್ರ ಬಿಷಪ್ ರೈಟ್ ರೆವರನ್, ಬಿಷಪ್ ಸೆಬ್ಯಾಸ್ಟಿಯನ್ ಎಡೆಯಂದರತ್ ಅಧ್ಯಕ್ಷತೆ ವಹಿಸಿದ್ದರು. ಉನ್ನತ ಪ್ರಾಂತೀಯ ಅಧಿಕಾರಿ ಕ್ಯಾಲಿಕಟ್ ರವರನ್, ಸಿಸ್ಟರ್ ಜಿಸ್ ಜೋಸೆಫ್, ಸಕಲ ಭಾನು, ಉಪತಹಸೀಲ್ದಾರ್‌ ಫಾ. ಹೋಮಸ್, ಬಾಲಕಿಯರ ಪದವಿಪೂರ್ವ ಕಾಲೇಜು ರಾಜ್ಯಪಾಲ ರಾಜಣ್ಣ, ರಾಷ್ಟ್ರೀಯ ಅಲ್ಪಸಂಖ್ಯಾತರ ಕಾರ್ಯದರ್ಶಿ ಮೈಸೂರು ವೀಣಾ ವಿಲಿಯಂ ರಿಷಿತ, ಪಿಆರ್ ರಾಮಚಂದ್ರ, ಬಿ.ಆರ್. ರಾಮಚಂದ್ರು, ತಾಲೂಕು ಮಹಿಳಾ ಘಟಕ ಅಧ್ಯಕ್ಷೆ ಅನಾಮಿಕ, ತಾಪಂ ಮಾಜಿ ಅಧ್ಯಕ್ಷ ನಿರೂಪ. ಚೈತನ್ಯ ಚಾಯ್ ಚಾರಿಟೇಬಲ್ ಟ್ರಸ್ಟ್ ಮುಖ್ಯ ಅಧಿಕಾರಿ ಸಿಸ್ಟರ್ ಜೀನಾ ಮ್ಯಾತ್ಯು, ನವಶಕ್ತಿ ಒಕ್ಕೂಟದ ಅಧ್ಯಕ್ಷೆ ರೇಖಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಡ್ಯ ಜಿಲ್ಲೆ: ಗ್ರಾಪಂನ ೫೯೦ ನೌಕರರಿಗೆ ಉದ್ಯೋಗ ಭದ್ರತೆ
ಚಿಕ್ಕ ಹಾಲಿವಾಣದಲ್ಲಿ ವೀರಭದ್ರೇಶ್ವರ ಗುಗ್ಗುಳ ಸಂಪನ್ನ