20ರಂದು ಡಿ.ದೇವರಾಜು ಅರಸು 110ನೇ ಜಯಂತಿ: ಎಡಿಸಿ ಮಾಹಿತಿ

KannadaprabhaNewsNetwork |  
Published : Aug 09, 2025, 12:00 AM IST
ಕ್ಯಾಪ್ಷನ7ಕೆಡಿವಿಜಿ34 ದಾವಣಗೆರೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಅಧ್ಯಕ್ಷತೆಯಲ್ಲಿ ದೇವರಾಜ ಅರಸು ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು.  | Kannada Prabha

ಸಾರಾಂಶ

ಮಾಜಿ ಸಿಎಂ ದೇವರಾಜು ಅರಸು 110ನೇ ಜಯಂತಿ ಆ.20ರಂದು ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ

ಮಾಜಿ ಸಿಎಂ ದೇವರಾಜು ಅರಸು 110ನೇ ಜಯಂತಿ ಆ.20ರಂದು ಅರ್ಥಪೂರ್ಣ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಡಿ.ದೇವರಾಜು ಅರಸು ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆ ದಿನ ಬಿ.ಎಸ್.ಎನ್.ಎಲ್. ಕಚೇರಿ ಮುಂಭಾಗದ ರುವ ಡಿ.ದೇವರಾಜ ಅರಸು ಪುತ್ಥಳಿಗೆ ಮಾಲಾರ್ಪಣೆ ಮತ್ತು ಪೂಜಾ ಕಾರ್ಯಕ್ರಮ ನೆರವೇರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ತುಂಗಭದ್ರಾ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.

ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕ್ವಿಜ್ ಏರ್ಪಡಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಡಿ.ದೇವರಾಜು ಅರಸು ಜಯಂತಿಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಅವರ ತತ್ವ, ಸಿದ್ಧಾಂತ ಜೊತೆಗೆ ಅವರ ಆಳ್ವಿಕೆ ಕಾಲದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ತಿಳಿಸಲು ಉಪನ್ಯಾಸ ಏರ್ಪಡಿಸಲಾಗುತ್ತದೆ. ಜಯಂತಿ ಪ್ರಯುಕ್ತ ಆ.20ರಂದು ಎಲ್ಲ ಸರ್ಕಾರಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಪೂಜಿಸಿ ಜಯಂತಿ ಕಾರ್ಯಕ್ರಮ ಆಚರಿಸಬೇಕು ಎಂದು ತಿಳಿಸಿದರು.ವೇದಿಕೆ ಕಾರ್ಯಕ್ರಮದಲ್ಲಿ ಅರಸು ಕುರಿತಂತೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲು ಮತ್ತು ಅರಸು ಕುರಿತ ಮಾಹಿತಿಯುಳ್ಳ ಕಿರುಪುಸ್ತಕಗಳನ್ನು ಸಂಗ್ರಹಿಸಿ ನೀಡಲು ಮತ್ತು ಸ್ಥಳದಲ್ಲಿ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ, ಡಿಡಿಪಿಐ ಕೊಟ್ರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ, ಮುಖಂಡರಾದ ಮಂಜುನಾಥ ಮಾಗನಹಳ್ಳಿ, ಭಗೀರಥ ಸಮಾಜ ಶಿಕ್ಷಣ ತಜ್ಞ ಬಸವರಾಜ ಸಾಗರ ಉಪಸ್ಥಿತರಿದ್ದರು.

- - -

-7ಕೆಡಿವಿಜಿ34:

PREV

Recommended Stories

ಸ್ವಾತಂತ್ರ್ಯಕ್ಕಾಗಿ 6.72 ಲಕ್ಷ ಜನ ಮರಣ
ಸಿಡಿದೆದ್ದ ಧರ್ಮಸ್ಥಳ ಭಕ್ತ ಅಭಿಮಾನಿಗಳು