ಕನ್ನಡಪ್ರಭ ವಾರ್ತೆ ಮಂಗಳೂರು
ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.ಪರಸ್ಪರರೊಳಗಿನ ಮನಸ್ತಾಪ ದೂರಗೊಳಿಸಿ ಬಂಧುತ್ವ ಗಟ್ಟಿಗೊಳಿಸಲು ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕರಾವಳಿಯ ಶೇ.98 ಮಂದಿಗೆ ಶಾಂತಿ ಬೇಕು, ಶೇ. 2 ರಷ್ಟು ಮಂದಿ ಸ್ವಾರ್ಥ, ರಾಜಕೀಯ ಲಾಭ, ಸಂಘಟನೆ ದುರುಪಯೋಗಪಡಿಸಲು ಅಶಾಂತಿಯನ್ನು ಉಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಕಾನೂನು, ಸುವ್ಯವಸ್ಥೆ ಸ್ಥಾಪಿಸುವ ಬಗ್ಗೆ ಎಲ್ಲ ಸಮಾಜದ ಮುಖಂಡರನ್ನು ಆಹ್ವಾನಿಸಿ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದರು.
ರಾಜಕೀಯ ಹಸ್ತಕ್ಷೇಪ ಇಲ್ಲ:ಮಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಹೊಸ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಅವರು ಸಾಕಷ್ಟು ಶ್ರಮಿಸುವ ವಿಶ್ವಾಸ ಇದೆ. ಭದ್ರತೆ ಮತ್ತು ಕಾನೂನು ಉಲ್ಲಂಘನೆ ವಿರುದ್ಧ ಯಾವುದೇ ರಾಜಿ ಇಲ್ಲದಂತೆ ಕ್ರಮ ಕೈಗೊಳ್ಳುವ ಅಧಿಕಾರ ನೀಡಲಾಗಿದೆ. ಸರ್ಕಾರದ ಬೆಂಬಲ ಅಥವಾ ಯಾವುದೇ ಹಸ್ತಕ್ಷೇಪ ಇಲ್ಲದೆ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೊಸ ಅಧಿಕಾರಿಗಳು ಕಾರ್ಯಪ್ರವೃತ್ತರಾಗಲಿದ್ದಾರೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಈ ಅಧಿಕಾರಿಗಳ ವರ್ಗಾವಣೆಯ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಇದ್ದರು.
----------------