ಮಳವಳ್ಳಿ: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಪಟ್ಟಣದ ಹಳೇ ಅಂಚೆ ಕಚೇರಿ ಬಳಿ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಒಕ್ಕಲಿಗರ ಸಂಘದ ತಾಲೂಕು ಘಟಕದ ಘಟಕದ ಅಧ್ಯಕ್ಷ ವಿ.ಪಿ.ನಾಗೇಶ್ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿಯೇ ಮೊದಲು ಪೂಜೆ ಮಾಡಿಸಲಾಗಿತ್ತು. ದೈವ ಶಕ್ತಿಯಿಂದಲೇ ರಥೋತ್ಸವದ ದಿನವೇ ಅವರು ಮುಖ್ಯಮಂತ್ರಿಯಾಗುತ್ತಿದ್ದಾರೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಚಿಕ್ಕರಾಜು ಹಾಗೂ ಸಾವಯವ ಕೃಷಿಕರ ಸಂಘದ ಅಧ್ಯಕ್ಷ ಎಂ.ಎನ್.ಮಹೇಶ್ ಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ಪ್ರಗತಿಗೆ ಮತ್ತಷ್ಟು ಕೊಡುಗೆ ನೀಡಲಿದ್ದಾರೆ ಎಂದರು.
ಈ ವೇಳೆ ಮುಖಂಡರಾದ ಬಿ.ಎಂ.ಮಲ್ಲಯ್ಯ, ರುದ್ರಸ್ವಾಮಿ, ಎಂ.ಎನ್.ಜಯರಾಮು, ಬಬ್ರುವಾಹನ, ಶಿವಣ್ಣ, ವೆಂಕಟರಾಮು ಪಾಲ್ಗೊಂಡಿದ್ದರು.