ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿಸಿಎಂ ಡಿಕೆಶಿ ಕುಟುಂಬ ಭೇಟಿ, ವಿಶೇಷ ಪೂಜೆ

KannadaprabhaNewsNetwork | Published : Jun 26, 2024 12:40 AM

ಸಾರಾಂಶ

ಡಿ.ಕೆ. ಶಿವಕುಮಾರ್ ಕುಟುಂಬಸ್ಥರು ಸುಬ್ರಹ್ಮಣ್ಯ ದೇವರ ದರುಶನ ಪಡೆದು ಮಹಾಪೂಜೆಯಲ್ಲಿ ಭಾಗವಹಿಸಿದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಸೇವೆ ನೆರವೇರಿಸಿದರು.

ಮಂಗಳವಾರ ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೇವಸ್ಥಾನದ ವತಿಯಿಂದ, ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪ್ರಮುಖರು ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಕುಟುಂಬಸ್ಥರು ಸುಬ್ರಹ್ಮಣ್ಯ ದೇವರ ದರುಶನ ಪಡೆದು ಮಹಾಪೂಜೆಯಲ್ಲಿ ಭಾಗವಹಿಸಿದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಭೋಜನ ಪ್ರಸಾದ ಸ್ವೀಕರಿಸಿದರು.

ಸಂಜೆ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಪ್ರಸಾದ ಸ್ವೀಕರಿಸಿದರು. ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಡಿ.ಕೆ., ಪುತ್ರ ಅಮರ್ಥ್ಯ, ಪುತ್ರಿ ಆಭರಣ ಜೊತೆಗಿದ್ದರು.

ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮಹೋಪಾತ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ನಾಯಕ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಡಬ ತಹಸೀಲ್ದಾರ್ ಪ್ರಭಾಕರ ಕಜೂರೆ, ಆರ್‌ಐ ಪೃಥ್ವಿ, ಪ್ರಮುಖರಾದ ಎಂಎಲ್‌ಸಿ ಹರೀಶ್ ಕುಮಾರ್, ಪದ್ಮರಾಜ್ ರಾಮಯ್ಯ, ಜಿ. ಕೃಷ್ಣಪ್ಪ, ಮಿಥುನ್ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕ ಪಕ್ಕಳ, ರಕ್ಷಿತ್ ಶಿವರಾಂ ಬೆಳ್ತಂಗಡಿ, ನಿತ್ಯಾನಂದ ಮುಂಡೋಡಿ, ಅಶೋಕ್ ನೆಕ್ರಾಜೆ, ಸುಧೀರ್ ಕುಮಾರ್ ಶೆಟ್ಟಿ, ವೆಂಕಪ್ಪ ಗೌಡ, ಮಾಧವ ದೇವರಗದ್ದೆ, ಹರೀಶ್ ಇಂಜಾಡಿ, ವಿಮಲ ರಂಗಯ್ಯ, ರಾಜೀವಿ ಆರ್. ರೈ, ಡಾ. ರಘು, ಬಾಲಕೃಷ್ಣ ಬಲ್ಲೇರಿ, ಜಿ.ಪಂ. ಸದಸ್ಯ ಪಿ.ಪಿ. ವರ್ಗಿಸ್, ಗಣೇಶ್ ಕೈಕುರೆ, ಕೃಷ್ಣಮೂರ್ತಿ ಭಟ್, ಮೋಹನ್ ದಾಸ್ ರೈ, ಶಿವರಾಮ್ ರೈ, ಪಿ.ಸಿ. ಜಯರಾಮ್, ಮಾಸ್ಟರ್ ಪ್ಲಾನ್ ಸದಸ್ಯರಾದ ಸತೀಶ್ ಕೂಜುಗೋಡು, ಪವನ್ ಎಂ.ಡಿ, ಗುಣವರ್ದನ್‌ ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Share this article