ದ.ಕ.- ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ 6.41 ಕೋಟಿ ರು. ಲಾಭ

KannadaprabhaNewsNetwork |  
Published : Sep 10, 2025, 01:04 AM IST
09ಮೀನು | Kannada Prabha

ಸಾರಾಂಶ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ: ಯಶ್ಪಾಲ್‌

ಕನ್ನಡಪ್ರಭ ವಾರ್ತೆ ಉಡುಪಿ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ ಮಾತನಾಡಿದ ಯಶ್ಪಾಲ್‌, ಫೆಡರೇಶನ್ ಪ್ರಸಕ್ತ ಸಾಲಿನಲ್ಲಿ 212 ಕೋಟಿ ರು. ವ್ಯವಹಾರದೊಂದಿಗೆ ಒಟ್ಟು 6.41 ಕೋಟಿ ರು. ಲಾಭ ಗಳಿಸಿದೆ. ಹಿಂದಿನ ಹಲವು ವರ್ಷಗಳಿಂದ ನಾನಾ ಕಾರಣಗಳಿಂದ ನಷ್ಟದಲ್ಲಿದ್ದ ಸಂಸ್ಥೆಯು ಅನೇಕ ಏರಿಳಿತಗಳನ್ನು ಎದುರಿಸಿ ಕಳೆದ 26 ವರ್ಷಗಳಲ್ಲಿ ಒಟ್ಟು 44 ಕೋಟಿ ರು. ಲಾಭ ದಾಖಲಿಸುವ ಮೂಲಕ ಮಾದರಿ ಸಹಕಾರಿ ಸಂಸ್ಥೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಂಸ್ಥೆಯನ್ನು ನೋಡಲ್ ಸಂಸ್ಥೆಯಾಗಿ ಆಯ್ಕೆ ಮಾಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಒಟ್ಟು ೨೧ ಮೀನುಗಾರಿಕಾ ಸಂಘಗಳಿಗೆ ತರಬೇತಿ, ಅಧ್ಯಯನ ಪ್ರವಾಸ ಒಳಗೊಂಡಂತೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ಒದಗಿಸುವಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಭಾವಂತ ಮಕ್ಕಳಿಗೆ ೨೫ ಲಕ್ಷ ರು. ಪ್ರತಿಭಾ ಪುರಸ್ಕಾರ, ಸದಸ್ಯ ಗ್ರಾಹಕರಿಗೆ ೪ ಕೋಟಿ ರು. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ 20 ಲಕ್ಷ ರು. ಆರೋಗ್ಯನಿಧಿ ನೀಡಲಾಗಿದೆ ಎಂದರು.ಸಭೆಯಲ್ಲಿ ಫೆಡರೇಶನಿನ ಉಪಾಧ್ಯಕ್ಷ ದೇವಪ್ಪ ಕಾಂಚನ್, ವ್ಯವಸ್ಥಾಪಕ ನಿದೇರ್ಶಕಿ ಶ್ರೀಮತಿ ದರ್ಶನ್ ಹಾಗೂ ಆಡಳಿತ ಮಂಡಳಿಯ ನಿದೇರ್ಶಕರು, ಸದಸ್ಯರು ಉಪಸ್ಥಿತರಿದ್ದರು.

------------ಮೀನುಗಾರರಿಗೆ ಉಚಿತ ಲೈಫ್‌ಜಾಕೆಟ್

ಕಳೆದ ಕೆಲವು ವರ್ಷಗಳಿಂದ ಮೀನುಗಾರಿಕೆ ಸಂದರ್ಭದಲ್ಲಿ ಉಂಟಾದ ದುರಂತದಲ್ಲಿ ಹಲವಾರು ಮೀನುಗಾರರು ಸಾವಿಗೀಡಾಗಿದ್ದು, ಫೆಡರೇಶನ್ ನೇತೃತ್ವದಲ್ಲಿ ವಿವಿಧ ಮೀನುಗಾರಿಕಾ ಸಹಕಾರಿ ಸಂಘಗಳು ಮತ್ತು ಮೀನುಗಾರಿಕೆ ಇಲಾಖೆಯ ಸಹಕಾರದೊಂದಿಗೆ ನಾಡದೋಣಿ ಮೀನುಗಾರರಿಗೆ ಉಚಿತವಾಗಿ ಉತ್ತಮ ಗುಣಮಟ್ಟದ ಲೈಫ್ ಜಾಕೇಟ್ ನೀಡಲು ನಿರ್ಧರಿಸಲಾಗಿದೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷ ರು.ಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಯಶ್ಪಾಲ್ ಸುವರ್ಣ ಸಭೆಯಲ್ಲಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಪುಸ್ತಕಗಳನ್ನು ಕೊಂಡು ಕೊಂಡಾಡಿ : ಹರಿಕೃಷ್ಣ ಪುನರೂರು
ಸಹಕಾರ ತತ್ವದಡಿ ಸಮಾಜಮುಖಿಯಾಗಿರುವ ಮಹಿಳೆ