- ಮಾನವ ಸರಪಳಿ, ಟಯರ್ ಸುಟ್ಟು ಆಕ್ರೋಶ
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಒತ್ತಾಯಿಸಿದ್ದಾರೆ.
ಬಿಜೆಪಿಯಿಂದ ವಿಧಾನ ಪರಿಷತ್ತು ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಮಹಾತ್ಮಾ ಗಾಂಧಿ ವೃತ್ತದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಸಿ.ಟಿ.ರವಿ ಅವರ ಭಂಧನ ಅಮಾನವೀಯ ಘಟನೆ. ರಾಷ್ಟ್ರೀಯ ನಾಯಕರಿಗೆ ಹೀಗಾದರೆ ಹೇಗೆ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ಮೂಡಾ, ವಾಲ್ಮೀಕಿ ಇತ್ಯಾದಿ ಹಗರಣಗಳನ್ನು ಮುಚ್ಚಿಹಾಕಲು, ಈ ಪ್ರಕರಣವನ್ನು ಮಾಡಿದ್ದಾರೆ. ಎಲ್ಲ ವರ್ಗದವರಿಗೆ ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಚ್.ಎಲ್. ರಮೇಶ್ ಮಾತನಾಡಿ ರಾಜ್ಯ ಸರ್ಕಾರ ವಿವಿಧ ಹಗರಣಗಳನ್ನು ಮುಚ್ಚಿ ಹಾಕಲು ಸರ್ವಾಧಿಕಾರ ಮಾಡುತ್ತಿದೆ. ಕೂಡಲೇ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ ಮಾತನಾಡಿ ನಮ್ಮ ನಾಯಕರನ್ನು ಬಂಧಿಸಿರುವುದು, ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು. ಎಂ.ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಹಗರಣ ಮುಚ್ಚಿಹಾಕುವ ಯತ್ನ ನಡೆದಿದೆ ಎಂದರು.
20ಕೆಟಿಆರ್.ಕೆ.1ಃ