ಡಿ.ಶಶಿಕುಮಾರ್‌, ವಿ.ಎನ್‌.ಗೀತಾಮಣಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ

KannadaprabhaNewsNetwork | Published : Mar 25, 2025 12:48 AM

ಸಾರಾಂಶ

ನಗರದ ಪಿಇಎಸ್‌ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಡಿ.ಶಶಿಕುಮಾರ್‌, ಮಂಡ್ಯದ ಕೇಂದ್ರ ಅಕ್ಕಮಹಾದೇವಿ ಮಹಿಳಾ ವಿವಿ ಸಹಾಯಕ ವಿ.ಎನ್‌.ಗೀತಾಮಣಿ ಅವರಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಪಿಇಎಸ್‌ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಡಿ.ಶಶಿಕುಮಾರ್‌, ಮಂಡ್ಯದ ಕೇಂದ್ರ ಅಕ್ಕಮಹಾದೇವಿ ಮಹಿಳಾ ವಿವಿ ಸಹಾಯಕ ವಿ.ಎನ್‌.ಗೀತಾಮಣಿ ಅವರಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜ್ಞಾನದೀಪ ವಿದ್ಯಾಲಯ ಎಜುಕೇಷನ್‌ ಟ್ರಸ್ಟ್‌, ಆಗಮ್ಯಾಸ್‌ ಕಿಡ್ಸ್‌ ಕಾರ್ನರ್‌ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್‌ ಜವರೇಗೌಡ ಮಾತನಾಡಿ, ಪೋಷಕರು ಮಕ್ಕಳಿಗೆ ದುಬಾರಿ ವಸ್ತುಗಳನ್ನು ಕೊಡಿಸುವ ಮನೋಭಾವ ಕಡಿಮೆ ಆಗಬೇಕು. ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಬೇಕು ಎಂದು ತಿಳಿಸಿದರು.

ಪ್ರಸ್ತುತ ಕೆಲ ಮಕ್ಕಳು ಕೆಟ್ಟ ಚಟಗಳಿಗೆ ದಾಸರಾಗಿ ದಾರಿ ತಪ್ಪುತ್ತಿದ್ದಾರೆ. ಇದನ್ನು ತಡೆಯಬೇಕು. ತಮ್ಮ ಮನೆಗಳ ಆರ್ಥಿಕ ಪರಿಸ್ಥಿತಿಯನ್ನು ಮಕ್ಕಳಿಗೆ ತಿಳಿಸಬೇಕು. ಮಹಾನ್‌ ಸಾಹಿತಿಗಳ ಕೃತಿಗಳ ಓದುವ ಹವ್ಯಾಸ ರೂಢಿಸಿಕೊಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ(ಉತ್ತರ ವಲಯ)ದ ತಾಲೂಕು ಅಧ್ಯಕ್ಷ ಶಿವಣ್ಣ ಮಂಗಲ ಮಾತನಾಡಿ, ಶಿಕ್ಷಣವು ಖಾಸಗೀಕರಣವಾಗುತ್ತಿದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದು ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಡಿ.ಶಶಿಕುಮಾರ್‌, ವಿ.ಎನ್‌.ಗೀತಾಮಣಿ ಅವರಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಚಂದ್ರಶೇಖರ ದ.ಕೋ.ಹಳ್ಳಿ, ಜ್ಞಾನದೀಪ ವಿದ್ಯಾಲಯ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಸೋಮಶೇಖರಯ್ಯ, ಕಾರ್ಯದರ್ಶಿ ಹೊನ್ನಮ್ಮ, ಮುಖ್ಯ ಶಿಕ್ಷಕಿ ಗೀತಾ ಮಂಜು, ಶಿಕ್ಷಕಿಯರಾದ ಸವಿತಾ, ಶ್ವೇತಾ, ಭವ್ಯಾ, ಪವಿತ್ರಾ, ಪುಟ್ಬಾಲ್‌ ಮಂಜು ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

Share this article