ಕನ್ನಡಪ್ರಭ ವಾರ್ತೆ ಮೈಸೂರು
ದಡದಕಲ್ಲಹಳ್ಳಿ ಗ್ರಾಮದಲ್ಲಿ 80 ಲಕ್ಷ ವೆಚ್ಚದಲ್ಲಿ ಗ್ರಾಮದ ಪರಿಮಿತಿಯ ರಸ್ತೆಗಳ ಅಭಿವೃದ್ಧಿಗೆ ಶಾಸಕರು ಚಾಲನೆ ನೀಡಿದರು. ಈ ವೇಳೆ ಕೆಲವು ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆಯಾಗುತ್ತಿದ್ದು, ನಿರಂತರ ವಿದ್ಯುತ್ ಸಂಪರ್ಕವನ್ನು ಒದಗಿಸಲು ಗ್ರಾಮಸ್ಥರು ಕೋರಿದರು. ಸೆಸ್ಕ್ ಅಧೀಕ್ಷಕ ಎಂಜಿನಿಯರ್ ದೂರವಾಣಿ ಮೂಲಕ ಮಾತನಾಡಿದ ಶಾಸಕರು, ಕೂಡಲೇ ಸದರಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಒದಗಿಸಲು ಸೂಚಿಸಿದರು.
ಹೊಸಕೋಟೆಯಿಂದ ಯಾಚೇಗೌಡನಹಳ್ಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಯಾಚೇಗೌಡನಹಳ್ಳಿ ಗ್ರಾಮದ ಪರಿಮಿತಿಯಲ್ಲಿ 23 ಲಕ್ಷ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದರು.ಯಾಚೇಗೌಡನಹಳ್ಳಿ ಗ್ರಾಮದಿಂದ ಕಾವೇರಿ ಹಿನ್ನೀರಿಗೆ ಹೋಗುವ ರಸ್ತೆ ಹಾಳಾಗಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿಪಡಿಸಿಕೊಡುವಂತೆ ಅಲ್ಲಿನ ರೈತರು ಕೋರಿದರು. ಶಾಸಕರು ಮುಂದಿನ ಅನುದಾನದಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸುವ ಭರವಸೆ ನೀಡಿದರು.
80 ಲಕ್ಷ ರೂ. ವೆಚ್ಚದಲ್ಲಿ ಹೊಸಕೋಟೆ ಗ್ರಾಮದ ಪರಿಮಿತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡುವಂತೆ ಕೋರಿದರು. ಶಾಸಕರ ಅನುದಾನದಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.