ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್ ಸ್ವಾಯತ್ತ ಕಾಲೇಜು ವಾರ್ಷಿಕೋತ್ಸವ ಉದ್ಘಾಟನೆಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದ್ದಾರೆ.ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ (ಶಿಕ್ಷಣ) ಅದರ ವೇಗವರ್ಧಕವಾಗಿದೆ ಎಂದ ಅವರು, ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದರು.ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಮಾತನಾಡಿ, ಸಾಂಸ್ಕೃತಿಕ, ಕ್ರೀಡೆ ಜೊತೆ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಆಳ್ವಾಸ್, ಇಂದು ಶೈಕ್ಷಣಿಕ ಕ್ಷೇತ್ರದ ಮಾದರಿ ಆಗಿದೆ ಎಂದರು. 1998 ಆರಂಭಗೊಂಡ ಆಳ್ವಾಸ್ ಕಾಲೇಜಿನಲ್ಲಿ ಈವರೆಗೆ 68,401 ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ನ್ಯಾಕ್ ಎ ಶ್ರೇಣಿ ಪಡೆದಿದೆ. ಅಂಕದ ಜೊತೆ ವಿವಿಧ ಸಾಧನೆಗಳ ಮೂಲಕ ಬಯೋಡಾಟ ಗಟ್ಟಿಯಾಗಿರಲಿ. ಅದಕ್ಕಾಗಿ ಸಾಧನೆ ಅವಶ್ಯ ಎಂದರು.
ಬೆಂಗಳೂರಿನ ದಿಶಾ ಭಾರತ್ ಸಂಸ್ಥಾಪಕಿ ರೇಖಾ ರಾಮಚಂದ್ರ ಮಾತನಾಡಿ, ನಮ್ಮಲ್ಲಿ ಧನಾತ್ಮಕ, ಭಾವುಕ ಛಲ, ಉದ್ದೇಶ ಮತ್ತು ದೇಶಭಕ್ತಿ ಇರಬೇಕು ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಣಕ್ಕೆ ನ್ಯಾಯ ನೀಡುವುದು ನಮ್ಮ ಉದ್ದೇಶ. ನಿಮ್ಮ ಸಾಧನೆ, ಸಾಮಾಜಿಕ ಕೊಡುಗೆಯೇ ನಮಗೆ ಪ್ರೇರಣೆ ಎಂದರು.
ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ವಾರ್ಷಿಕ ವರದಿ ವಾಚಿಸಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಕುಲಸಚಿವ (ಪರೀಕ್ಷಾಂಗ) ಕೆ ನಾರಾಯಣ ಶೆಟ್ಟಿ, ಆಳ್ವಾಸ್ (ಸ್ವಾಯತ್ತ) ಕಾಲೇಜು ಕುಲಸಚಿವ (ಶೈಕ್ಷಣಿಕ) ಟಿ.ಕೆ. ರವೀಂದ್ರನ್, ಆಳ್ವಾಸ್ (ಸ್ವಾಯತ್ತ) ಕಾಲೇಜು ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು.ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಳ್ವಾಸ್ ವೆಲ್‌ನೆಸ್ ಸೆಂಟರ್ ನಿರ್ದೇಶಕಿ ಡಾ. ದೀಪಾ ಕೊಠಾರಿ ಹೊರತಂದ ಕೈಪಿಡಿ ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.