ಪ್ರತಿನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಅತ್ಯಗತ್ಯ: ಡಾ.ಪುಷ್ಪಲತಾ

KannadaprabhaNewsNetwork |  
Published : Oct 18, 2026, 02:45 AM IST
17ಕೆಎಂಎನ್ ಡಿ30 | Kannada Prabha

ಸಾರಾಂಶ

ಯೋಗಾಭ್ಯಾಸವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಹಸನಾಗುತ್ತದೆ. ಯೋಗ ಅಭ್ಯಾಸದಲ್ಲಿ ಭಾರತ ವಿಶ್ವಕ್ಕೆ ವಿಶ್ವ ಗುರುವಾಗಿದೆ ಪ್ರತಿಯೊಬ್ಬರು ಯೋಗಾಭ್ಯಾಸ ಮತ್ತು ಧ್ಯಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡೋಣ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಆರೋಗ್ಯ ಹಾಗೂ ಮಾನಸಿಕ ಸ್ಥಿತಿಯನ್ನು ಸದೃಢವಾಗಿ ಇಟ್ಟಿಕೊಳ್ಳಲು ಪ್ರತಿನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಅತ್ಯಗತ್ಯ ಎಂದು ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಪುಷ್ಪಲತಾ ಹೇಳಿದರು.

ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂಭಾಗ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನೆಹರು ಯುವಕೇಂದ್ರ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಜಿಲ್ಲೆಯ ಎಲ್ಲಾ ವಿವಿಧ ಯೋಗನಿರತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯೋಗಾಭ್ಯಾಸವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಹಸನಾಗುತ್ತದೆ. ಯೋಗ ಅಭ್ಯಾಸದಲ್ಲಿ ಭಾರತ ವಿಶ್ವಕ್ಕೆ ವಿಶ್ವ ಗುರುವಾಗಿದೆ ಪ್ರತಿಯೊಬ್ಬರು ಯೋಗಾಭ್ಯಾಸ ಮತ್ತು ಧ್ಯಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡೋಣ ಎಂದರು.

ನಂತರ ಪತಾಂಜಲಿ ಯೋಗ ಶಿಕ್ಷಣ ಸಂಸ್ಥೆ ಜಿಲ್ಲಾ ಸಂಚಾಲಕ ವಿ.ಬಿ.ರವಿ, ಯೋಗ ಶಿಕ್ಷಕ ಶಂಕರನಾರಾಯಣ ಶಾಸ್ತ್ರೀ, ಸೂರ್ಯ ನಮಸ್ಕಾರದ ವಿವಿಧ ಭಂಗಿಗಳನ್ನ ವೇದಿಕೆ ಮುಂದಿದ್ದ ಯೋಗಾಶಕ್ತರಿಗೆ ಹೇಳಿಕೊಟ್ಟರು. ಬಳಿಕ ಆಯುಷ್ ಇಲಾಖೆ ವತಿಯಿಂದ ಯೋಗದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ಈ ವೇಳೆ ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮ, ಜಿಲ್ಲಾ ಆಯುಷ್ ನಿವೃತ್ತ ಅಧಿಕಾರಿ ಡಾ.ಎಂ.ನಾಗೇಶ, ಭಾರತಿನಗರದ ಜಿ.ಮಾದೇಗೌಡ ಇನ್ಸಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ನಂದೀಶ್, ನಗುವನಹಳ್ಳಿ ಎಂ.ಐ.ಟಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ ಸೇರಿದಂತೆ ಇತರರ ಉಪಸ್ಥಿತರಿದ್ದರು.

ಮಹಿಳಾ ದಸರಾ ಹಗ್ಗಜಗ್ಗಾಟ ಸ್ಪರ್ಧೆ

ಶ್ರೀರಂಗಪಟ್ಟಣ ತಾಲೂಕು ಕ್ರೀಡಾಂಗಣದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ದಸರಾ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ತಂಡದ ಗೆಲುವಿಗಾಗಿ ಪರಸ್ಪರ ಸೆಣಸಾಡಿದರು. ಈ ವೇಳೆ ಅಚೀವರ್ಸ್ ಅಕಾಡೆಮಿ ಮುಖ್ಯಸ್ಥ ಡಾ.ರಾಘವೇಂದ್ರ, ಐಕ್ಯ ಅಲಯನ್ಸ್ ಅಧ್ಯಕ್ಷೆ ಎನ್. ಸರಸ್ಪತಿ, ದೈಹಿಕ ಶಿಕ್ಷಕ ರಂಗನಾಥ್, ರಂಗನಾಯಕಿ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಬಳ್ಳಾರಿಯ ಗೋಪಿಚಂದ್ ಲಿಂಗುಟ್ಲ ಆಯ್ಕೆ
ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ವಿಸ್ತರಿಸಿ