ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂಭಾಗ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಗಾಭ್ಯಾಸವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಹಸನಾಗುತ್ತದೆ. ಯೋಗ ಅಭ್ಯಾಸದಲ್ಲಿ ಭಾರತ ವಿಶ್ವ ಗುರುವಾಗಿದೆ. ಯೋಗಭ್ಯಾಸದಿಂದ ಮನಸ್ಸಿನ ಚಂಚಲತೆ ಹೋಗಲಾಡಿಸಬಹುದು. ಪ್ರತಿಯೊಬ್ಬರು ಯೋಗಾಭ್ಯಾಸ ಮತ್ತು ಧ್ಯಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡೋಣ ಎಂದರು.ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಅಷ್ಟಾಂಗ ಯೋಗವನ್ನು ಸಿದ್ಧಿ ಪಡಿಸಿಕೊಳ್ಳುವುದು ಸುಲಭದ ಮಾತಲ್ಲ. ಅಷ್ಟಾಂಗ ಯೋಗವನ್ನು ಸಿದ್ಧಿ ಪಡಿಸಿಕೊಂಡ ಎಷ್ಟು ಋಷಿ ಮುನಿಗಳು ಇಂದು ಜೀವಂತವಾಗಿದ್ದಾರೆ. ಯೋಗಕ್ಕೆ ಸರಿಸುಮಾರು 5 ಸಾವಿರ ವರ್ಷಗಳ ಇತಿಹಾಸವಿದೆ ಎಂದರು.
ಆಯುಷ್ ಇಲಾಖೆ ಉತ್ತಮ ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದೆ. ಯೋಗವನ್ನು ಕಲಿಯಲಿಕ್ಕಾಗಿ ವಿದೇಶಿಗರು ಭಾರತಕ್ಕೆ ಬರುತ್ತಿರುವುದನ್ನು ಇಂದು ನಾವು ಕಾಣಬಹುದು ಎಂದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಪುಷ್ಪಲತಾ ಸೇರಿದಂತೆ ಇತರರು ಇದ್ದರು.
ಶ್ರೀರಂಗಪಟ್ಟಣ:
ಪಟ್ಟಣದ ಮಯೂರ ರಿವರ್ ವ್ಯೂವ್ ಬಳಿಯ ಕಾವೇರಿ ನದಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ರಾಜ್ಯದ ಮಟ್ಟದ ಕಯೋಕ್ ಕ್ರಾಸ್ ಆಯೋಜಿಸಲಾಗಿತ್ತು.