ಹೈನುಗಾರಿಕೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿ: ಸಿ.ಶಿವಕುಮಾರ್

KannadaprabhaNewsNetwork |  
Published : Aug 01, 2025, 12:00 AM IST
31ಕೆಎಂಎನ್ ಡಿ14 | Kannada Prabha

ಸಾರಾಂಶ

ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಪ್ರತಿಯೊಬ್ಬ ರೈತರು ಅರಿವು ಮೂಡಿಸಿಕೊಂಡು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು. ಮನ್ನುಲ್ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಾ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಹೈನುಗಾರಿಕೆ ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಬೆಳವಣಿಗೆಗೆ ಸರಕಾರಿಯಾಗಿದೆ ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.

ತಾಲೂಕಿನ ಕಾಳೇಗೌಡನಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆಯಿಂದ ಸಾವಿರಾರು ಕುಟುಂಬಗಳ ಬದುಕಿಗೆ ಆರ್ಥಿಕ ಸ್ವಾವಲಂಬಿಯಾಗಿದೆ. ಹೈನುಗಾರಿಕೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.

ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಪ್ರತಿಯೊಬ್ಬ ರೈತರು ಅರಿವು ಮೂಡಿಸಿಕೊಂಡು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು. ಮನ್ನುಲ್ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಾ. ನನ್ನ ಅವಧಿಯಲ್ಲಿ ಒಕ್ಕೂಟದಿಂದ ರೈತರಿಗೆ ದೊರೆಯುವ ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು, ಇಲ್ಲದಿದ್ದರೆ ರಾಸುಗಳು ಅಕಾಲಿಕ ಮರಣಹೊಂದಿದರೆ ರೈತರಿಗೆ ಪರಿಹಾರದ ಹಣ ದೊರೆಯುವುದಿಲ್ಲ. ಹಾಗಾಗಿ ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು ಎಂದರು.

ಇದೇ ವೇಳೆ ಸಿ.ಶಿವಕುಮಾರ್ ಅವರನ್ನು ಅಭಿನಂದಿಸಲಾಯಿತು. ವಿಸ್ತರ್ಣಾಧಿಕಾರಿ ಜಿ.ನಾಗೇಂದ್ರಕುಮಾರ್, ಡೇರಿ ಅಧ್ಯಕ್ಷೆ ಸಾವಿತ್ರಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ನಿರ್ದೇಶಕರಾದ ಲತಾಮಣಿ, ಕೆ.ಡಿ. ಶಾಂಭವಿ, ಚಂದ್ರಮ್ಮ, ಭಾಗ್ಯಮ್ಮ, ಸಾವಿತ್ರಮ್ಮ, ವನಜಾಕ್ಷಿ, ಪುಷ್ಪ, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಶಿವಕುಮಾರ್, ಗ್ರಾಪಂ ಸದಸ್ಯರಾದ ಶ್ರೀನಿವಾಸ್, ವಸಂತೇಗೌಡ, ಮಾಜಿ ಸದಸ್ಯ ಜೆ.ರವಿ, ಗ್ರಾಪಂ ಮಾಜಿ ಅಧ್ಯಕಷ್ ಪಾಪಣ್ಣ, ಕೆ.ಸಿ.ಮಹದೇವಪ್ಪ, ಡೇರಿ ಕಾರ್‍ಯದರ್ಶಿ ಪಿ.ಮೀನಾಕ್ಷಿ, ಸಿಬ್ಬಂದಿ ಹೇಮಾವತಿ, ಲತಾ ಸೇರಿದಂತೆ ಹಲವರು ಇದ್ದರು.

ಪೌತಿ ಖಾತೆ ಅರ್ಜಿಗಳ ತ್ವರಿತ ವಿಲೇವಾರಿಗೆ ಅಗತ್ಯ ಕ್ರಮ: ಪರಶುರಾಮ ಸತ್ತಿಗೇರಿ

ಕನ್ನಡಪ್ರಭ ವಾರ್ತೆ ಮದ್ದೂರು

ಕಂದಾಯ ಇಲಾಖೆಯಿಂದ ಭೂಮಿಗೆ ಸಂಬಂಧಿಸಿದ ಪೌತಿ ಖಾತೆ ಅರ್ಜಿಗಳ ತ್ವರಿತ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ನೂತನ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಗುರುವಾರ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌತಿ ಖಾತೆ ಸಂಬಂಧಿಸಿದ ಅರ್ಜಿಗಳನ್ನು ಗ್ರಾಮ ಲೆಕ್ಕಾಧಿಕಾರಿಗಳೇ ರೈತರ ಮನೆ ಬಾಗಿಲಿಗೆ ತೆರಳಿ ಅರ್ಜಿಗಳನ್ನು ಪಡೆದು 15 ದಿನಗಳಲ್ಲಿ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಕಂದಾಯ ಇಲಾಖೆ ಭೂಮಿಯ ಎಲ್ಲಾ ದಾಖಲೆಗಳನ್ನು ಈಗಾಗಲೇ ಗಣಕೀ ಕೃತ ಗೊಳಿಸಿ ಆನ್ ಲೈನ್ ವ್ಯವಸ್ಥೆ ಪೂರ್ಣಗೊಳಿಸಲಾಗಿದೆ. ರೈತರು ಸೈಬರ್ ಸೆಂಟರ್ ಗಳಿಗೆ ತೆರಳಿ ತಮ್ಮಭೂಮಿ ದಾಖಲೆಗಳನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ 144ನೇ ನಿಷೇಧ ಆಜ್ಞೆ ಉಲ್ಲಂಘಿಸಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ತಾಲೂಕು ಆಡಳಿತಕ್ಕೆ ಸಾಕಷ್ಟು ದೂರುಗಳು ಬರುತ್ತಿವೆ. ಗಣಿಗಾರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ಮರಳು ದಂಧೆ ನಡೆಸುತ್ತಿರುವ ವ್ಯಕ್ತಿಗಳು ಮತ್ತು ದಂಧೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಶಿರಸ್ತೆದಾರ್ ಲಕ್ಷ್ಮಿ ನರಸಿಂಹ, ಚುನಾವಣಾ ಶಾಖೆಯ ಪವನ್ ಇದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು