ಕನ್ನಡಪ್ರಭ ವಾರ್ತೆ ಹಾರೋಹಳ್ಳಿ
ಹಾರೋಹಳ್ಳಿ ಗ್ರಾಮೀಣ ವಿದ್ಯಾಸಂಸ್ಥೆ ಆವರಣದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ಬಮೂಲ್ ಕಲ್ಯಾಣ ಟ್ರಸ್ಟ್ ಸಹಕಾರದಲ್ಲಿ ಹಾಲು ಉತ್ಪಾದಕರ ಮಕ್ಕಳ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಲು ಉತ್ಪಾದಕರಿಗೆ ಉಚಿತ ಕ್ಯಾನ್ ವಿತರಣೆ ಹಾಗೂ ಅತ್ಯುತ್ತಮ ಸಂಘ ಹಾಗೂ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಆರಂಭಿಸಿದ ಕ್ಷೀರ ಕ್ರಾಂತಿಯ ಪರವಾಗಿ ಸಣ್ಣ ರೈತರು, ಕೃಷಿ ಕಾರ್ಮಿಕರಿಗೆ ಹೈನುಗಾರಿಕೆಯಲ್ಲಿ ಅನುಕೂಲವಾಗಿದೆ. ಸರ್ಕಾರ ಪಶುಭಾಗ್ಯ ಯೋಜನೆಯಡಿ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡಿದೆ ಎಂದರು.ಬಡವರ ಕಾಮಧೇನಾಗಿರುವ ಹೈನುಗಾರಿಕೆಯನ್ನು ಹೆಚ್ಚು ಜನ ಅವಲಂಭಿಸಿದ್ದು, ಇದರಿಂದ ಲಕ್ಷಾಂತರ ಜನರು ಜೀವನ ಸಾಗಿಸುತ್ತಿದ್ದಾರೆ. 1.79 ಲಕ್ಷ ರೈತರು ಪ್ರತಿನಿತ್ಯ 19.50 ಲಕ್ಷ ಲೀಟರ್ ಹಾಲು ಪೂರೈಸುತ್ತಿದ್ದಾರೆ. ಈ ಉದ್ಯಮದಲ್ಲಿ ಇರುವ ರೈತರ ಶ್ರೇಯೋಭಿವೃದ್ಧಿಗಾಗಿ ಒಕ್ಕೂಟವು ರೈತರ ಕಲ್ಯಾಣ ಟ್ರಸ್ಟ್ ಸ್ಥಾಪಿಸಿದ್ದು, ಆ ಮೂಲಕ ಹೈನುಗಾರರ ಯೋಗ ಕ್ಷೇಮಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ರಾಸುಗಳಿಗೆ ವಿಮೆ ಯೋಜನೆಗಾಗಿ ₹50 ಕೋಟಿ ವೆಚ್ಚವಾಗಲಿದೆ. ಈಗಾಗಲೇ 2.77 ಲಕ್ಷ ಹಸುಗಳಿಗೆ ವಿಮೆ ನೀಡಲಾಗುತ್ತಿದೆ. ಇದರಲ್ಲಿ ಶೇ.50 ರಷ್ಟು ಹಣವನ್ನು ಬಮೂಲ್ ಸಂಸ್ಥೆಯೇ ಭರಿಸುವ ಮೂಲಕ ಹಲವಾರು ಬದಲಾವಣೆಗಳನ್ನು ತರಲಾಗಿದೆ ಎಂದು ಸುರೇಶ್ ತಿಳಿಸಿದರು.
ಬಮೂಲ್ ನಿರ್ದೇಶಕ ಹರೀಶ್‌ಕುಮಾರ್ ಪ್ರಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕ ಕೆ.ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಸಿ.ಬಿ ಅಶೋಕ್, ಮುಖಂಡರಾದ ಡಿ.ಎಂ.ವಿಶ್ವನಾಥ್, ಸರ್ದಾರ್ ಹುಸೇನ್, ಕೀರಣಗೆರೆ ಜಗದೀಶ್, ಮೋಹನ್ ಹೊಳ್ಳ, ಬೊಮುಲ್ ನಿರ್ದೇಶಕರಾದ ಪಿ.ನಾಗರಾಜು, ಲಿಂಗೇಶ್‌ಕುಮಾರ್, ಸತೀಶ್, ಆನಂದ ಮತ್ತಿತರರು ಉಪಸ್ಥಿತರಿದ್ದರು.
ಬಮೂಲ್ ಕಲ್ಯಾಣ ಟ್ರಸ್ಟ್ ಪ್ರತಿಭಾ ಪುರಸ್ಕಾರದಲ್ಲಿ ರೈತರು ಅವಲಂಬಿಸಿರುವ ಹೈನುಗಾರಿಕೆ ಜೊತೆಗೆ ರೈತಾಪಿ ವರ್ಗ ಸ್ವಾವಲಂಬಿ ಬದುಕು ನಡೆಸಲು ಸಹಕಾರಿಯಾಗುವ ಭಾಷಣ ಮಾಡಿದ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರನ್ನು ಸಮಾರಂಭದ ಮಧ್ಯೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಿ.ಎಸ್.ಶೃತಿ ಬಿಡದಿ ಟೌನ್ ಶಿಪ್ ವಿಚಾರವಾಗಿ ಪ್ರಶ್ನೆ ಕೇಳುವ ಮೂಲಕ ಅತಿಥಿಗಳು ಮತ್ತು ಸಭಿಕರು ಬೆರಗಾಗುವಂತೆ ಮಾಡಿದಳು.
ಆಗ ಡಿ.ಕೆ.ಸುರೇಶ್ ಮಾತನಾಡಿ, ನಗರೀಕರಣದಿಂದ ರೈತರ ಪ್ರಗತಿಯಾಗುತ್ತದೆ. ಕಾಲಕ್ಕೆ ತಕ್ಕಂತೆ ಚಿಂತನೆಗಳು ಬದಲಾಗಬೇಕು. ಜೊತೆಗೆ ಪ್ರಗತಿಯ ಆಶಯಗಳು ಬದಲಾಗಬೇಕು. ರೈತರ ಬದುಕು ಹಸನಾಗಬೇಕಾದರೆ ಆಧುನಿಕವಾಗಿ ಮುಂದುವರೆಯಬೇಕು. ಇದಕ್ಕೆ ನಗರೀಕರಣದ ಅವಶ್ಯಕತೆ ಇದೆ. ಇಂದು ಬಹುತೇಕ ಜನರು ಹಳ್ಳಿಗಳಲ್ಲಿ ವಾಸ ಮಾಡುತ್ತಿಲ್ಲ. ಹಬ್ಬ ಹರಿದಿನಗಳಲ್ಲಿ ಬಂದು ಹೋಗುತ್ತಾರೆ. ಅತಿಹೆಚ್ಚು ಜನ ನಗರವನ್ನೇ ಜನ ಅವಲಂಭಿಸಿದ್ದಾರೆ ಎಂದು ಉತ್ತರಿಸಿದರು.ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತಗೊಳಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ. ಆಡಳಿತ ಮತ್ತು ವಿರೋಧ ಪಕ್ಷಗಳು ಬೇದಭಾವ ಮರೆತು ಕೈಜೋಡಿಸಬೇಕು. ಭವಿಷ್ಯದಲ್ಲಿ ದೇಶವೇ ಅಭಿವೃದ್ಧಿಯ ವಿಚಾರದಲ್ಲಿ ಜಿಲ್ಲೆಯತ್ತ ನೋಡುವಂತಾಗಬೇಕು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಆಲೋಚನೆ ಅತ್ಯುತ್ತಮ ಮತ್ತು ದೂರದೃಷ್ಟಿ ಉಳ್ಳದ್ದಾಗಿದೆ.