ಹೈನುಗಾರಿಕೆ ಲಾಭದಾಯಕ ಉಪಕಸುಬು: ಶರತ್ ಬಚ್ಚೇಗೌಡ

KannadaprabhaNewsNetwork |  
Published : Jan 24, 2026, 03:00 AM IST
ಸೂಲಿಬೆಲೆ ಹೋಬಳಿ ಬೆಂಡಿಗಾನಹಳ್ಳಿ ಗ್ರಾಮದಲ್ಲಿ ನೆಡೆದ ಸಂಕ್ರಾAತಿ ಆಚರಣೆ ಹಾಗೂ ತಾಲ್ಲೂಕು ಮಟ್ಟದ ಹಾಲು ಕರೆಯುವ ಸ್ಪರ್ದೆ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ   ಉದ್ಘಾಟಿಸಿದರು, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಗ್ರಾಮೀಣ ರೈತರಿಗೆ ಹೈನುಗಾರಿಕೆ ಉಪಕಸುಬಾದರೂ ಲಾಭದಾಯಕಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು

ಸೂಲಿಬೆಲೆ: ಗ್ರಾಮೀಣ ರೈತರಿಗೆ ಹೈನುಗಾರಿಕೆ ಉಪಕಸುಬಾದರೂ ಲಾಭದಾಯಕಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೋಬಳಿಯ ಬೆಂಡಿಗಾನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಜಿಪಂ, ತಾಪಂ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬಮುಲ್‌ ಹಾಗೂ ಡೇರಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಆಚರಣೆ ಹಾಗೂ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡು ಆರ್ಥಿಕ ಸುಧಾರಣೆ ಕಂಡುಕೊಳ್ಳಬೇಕು ಎಂದು ಹೇಳಿದರು.

ಬಮೂಲ್ ನಿರ್ದೆಶಕ ಬಿ.ವಿ.ಸತೀಶಗೌಡ ಮಾತನಾಡಿ, ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಉತ್ತಮ ಬೆಳವಣಿಗೆ. ಎಲ್ಲಾ ಹಸುಗಳಿಗೆ ಬೂಸ, ಹಿಂಡಿ, ನೀರು ಮೇವಿನ ಸರಬರಾಜು ಮಾಡಲಾಗಿದೆ. ಎಲ್ಲರಿಗೂ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಪಶು ವೈಧ್ಯಾಧಿಕಾರಿ ಡಾ.ಮಂಜುನಾಥ್, ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಬೈರೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಕೆ.ಎಸ್.ಸುರೇಶ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ಕೃಷ್ಣಮೂರ್ತಿ, ಬೆಮೂಲ್ ನಿರ್ದೇಶಕ ಕೆ.ಎಂ.ಮಂಜುನಾಥ್, ಎಲ್‌ಎನ್‌ಟಿ ಮಂಜುನಾಥ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೇಶವಮೂರ್ತಿ, ತಾಪಂ ಮಾಜಿ ಅಧ್ಯಕ್ಷ ಡಾ.ಡಿ.ಟಿ.ವೆಂಕಟೇಶ್, ಹೊಸಕೋಟೆ ಶಿಬಿರದ ಉಪವ್ಯವಸ್ಥಾಪಕ ಶ್ರೀರಾಮ್, ಗ್ರಾಪಂ ಅಧ್ಯಕ್ಷೆ ಶಿವಕುಮಾರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ