ಆರ್ಥಿಕವಾಗಿ ಸದೃಢರಾಗಲು ಹೈನುಗಾರಿಕೆಯ ಉತ್ತಮ

KannadaprabhaNewsNetwork |  
Published : May 26, 2026, 01:15 AM IST
ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ನೂತನ 16 ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ 34 ಲಕ್ಷದ ರೂಗಳ ಹಾಲು ಶೇಖರಣ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದ ಶಾಸಕ ಎಸ್ ಆರ್ ಶ್ರೀನಿವಾಸ್. | Kannada Prabha

ಸಾರಾಂಶ

ಆರ್ಥಿಕವಾಗಿ ಸದೃಢರಾಗಲು ಹೈನುಗಾರಿಕೆಯ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿಕೊಡುತ್ತದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಆರ್ಥಿಕವಾಗಿ ಸದೃಢರಾಗಲು ಹೈನುಗಾರಿಕೆಯ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿಕೊಡುತ್ತದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯತಿ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ನೂತನ 16 ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ 34 ಲಕ್ಷದ ರೂಗಳ ಹಾಲು ಶೇಖರಣ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳಿಗೆ ತೊಂದರೆ ಆಗಬಾರದು ಎಂದು ಆ ಗ್ರಾಮಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಪ್ರಾರಂಭಿಸಿದ್ದೇವೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಮದಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗುತ್ತದೆ. ಡೈರಿಗಳಿಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲು ಹಾಲು ಶೇಖರಣ ಸಾಮಗ್ರಿಗಳು, ಹಾಲು ಪರೀಕ್ಷಾ ಸಾಮಗ್ರಿಗಳು, ಸಂಘಕ್ಕೆ ಬೇಕಾಗಿರುವ ಎಲ್ಲಾ ಮೂಲ ಸೌಕರ್ಯಗಳನ್ನು ನೀಡಲಾಗುತ್ತಿದೆ. ಇವುಗಳನ್ನು ಬಳಸಿಕೊಂಡು ಜನರಿಗೆ ಹತ್ತಿರವಾಗುವ ಕೆಲಸವನ್ನು ಮಾಡಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಆರ್.ವೆಂಕಟೇಶ್ ತುಳಸಿದಾಸ್, ಬಾಲಕೃಷ್ಣ, ಮಧು, ದರ್ಶನ್, ಶ್ರೀನಿವಾಸ್, ಉಂಡೆ ರಾಮಣ್ಣ, ಚಿದಾನಂದ್, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಸಿ.ರಾಜು, ಕೆ.ಎ.ಶಂಕರನಾಗ್, ಎಂ.ಎನ್.ಮಹೇಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೋಡಲ್ ಅಧಿಕಾರಿಗಳಿಂದ ಕಾಮಗಾರಿಗಳ ಪರಿಶೀಲನೆ
ಅನುವಾದಕ್ಕೆ ತಂತ್ರಜ್ಞಾನ ಪೂರಕವೇ ಹೊರತು ಪರ್ಯಾಯವಲ್ಲ