ಡೇರಿ ಪ್ರತಿನಿಧಿಗಳು ಹೈನುಗಾರರಿಗೆ ಅನ್ಯಾಯವಾಗದಂತೆ ಕೆಲಸ ಮಾಡಿ: ಡಿ.ಸಿ.ತಮ್ಮಣ್ಣ

KannadaprabhaNewsNetwork |  
Published : Jul 16, 2025, 12:45 AM IST
15ಕೆಎಂಎನ್ ಡಿ19 | Kannada Prabha

ಸಾರಾಂಶ

ಪ್ರಕೃತಿ ವಿಕೋಪ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ನಷ್ಟ ಹೊಂದುತ್ತಿರುವ ರೈತರಿಗೆ ಹೈನೋದ್ಯಮ ಆರ್ಥಿಕವಾಗಿ ವರದಾನವಾಗಿದೆ. ಇದರಿಂದ ರೈತ ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ಕೈಜೋಡಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸಹಕಾರ ಸಂಘದ ಜನಪ್ರತಿನಿಧಿಗಳು ಸ್ಪಂದಿಸಿ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಹಾಲು ಉತ್ಪಾದಕರ ಸಹಕಾರ ಸಂಘಗಳ ಜನಪ್ರತಿನಿಧಿಗಳು ಹೈನುಗಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸುವ ಮೂಲಕ ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ತಾಲೂಕಿನ ಗೊರವನಹಳ್ಳಿ ಡೇರಿ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ರೈತರು ತಮ್ಮ ಮೇಲೆ ವಿಶ್ವಾಸವಿಟ್ಟು ಸಂಘದ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದ್ದಾರೆ. ದಕ್ಕೆ ಬಾರದ ರೀತಿಯಲ್ಲಿ ಜನಪ್ರತಿನಿಧಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.

ಪ್ರಕೃತಿ ವಿಕೋಪ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ನಷ್ಟ ಹೊಂದುತ್ತಿರುವ ರೈತರಿಗೆ ಹೈನೋದ್ಯಮ ಆರ್ಥಿಕವಾಗಿ ವರದಾನವಾಗಿದೆ. ಇದರಿಂದ ರೈತ ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ಕೈಜೋಡಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸಹಕಾರ ಸಂಘದ ಜನಪ್ರತಿನಿಧಿಗಳು ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ಈ ವೇಳೆ ಸಂಘದ ನೂತನ ನಿರ್ದೇಶಕರಾದ ಜಿ.ಕೆ.ಪುಟ್ಟಸ್ವಾಮಿ, ಬಿ.ಸಿ.ಶಂಕರೇಗೌಡ, ಅವಿನಾಶ್, ಜಿ. ಬಿ.ಶಿವರಾಮು, ಕೆಂಪರಾಜು, ನವೀನ, ಪುಂಗ ಅವರನ್ನು ಅಭಿನಂದಿಸಲಾಯಿತು. ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಸಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಜು, ಮುಖಂಡರಾದ ಬೋರೇಗೌಡ, ಉಮೇಶ್, ಗೊರವನಹಳ್ಳ ಪ್ರಸನ್ನ, ಲಿಂಗಯ್ಯ ಮತ್ತಿತರರಿದ್ದರು.

ವಿಷಕಂಠರಿಗೆ ಪಿಎಚ್‌.ಡಿ ಪದವಿ

ಕೆ.ಎಂ.ದೊಡ್ಡಿ:

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ವಿಷಕಂಠರಿಗೆ ಪಿಎಚ್‌.ಡಿ ಲಭಿಸಿದೆ.

ಪ್ರಾಧ್ಯಾಪಕ ಡಾ.ಕೆ.ಎಸ್. ವೆಂಕಟೇಶಪ್ಪರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾದರ ಪಡಿಸಿದ problems and prospects of Sericulture - A Case study of Ramanagaram District in Karnataka ಎಂಬ ಮಹಾ ಪ್ರಬ್ರಂಧವನ್ನು ಆಂಧ್ರ ಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿಎಚ್‌.ಡಿ ಪದವಿಗಾಗಿ ಅಂಗೀಕರಿಸಿದೆ. ವಿಷಕಂಠ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದ ಚಿಕ್ಕೊಳಮ್ಮ ಮತ್ತು ಬೋಗೇಗೌಡ ದಂಪತಿ ಪುತ್ರರಾಗಿದ್ದಾರೆ.

PREV

Latest Stories

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ
ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ
ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ