ನಾಡಿಗೆ ದೈವಜ್ಞ ಬ್ರಾಹ್ಮಣರ ಸಮಾಜ ಕೊಡುಗೆ ಅಪಾರ: ಪೊನ್ನಣ್ಣ

KannadaprabhaNewsNetwork |  
Published : Jun 10, 2025, 05:53 AM IST
ಚಿತ್ರ :  8ಎಂಡಿಕೆ3 : ದೈವಜ್ಞ ಬ್ರಾಹ್ಮಣ ಸಮಾಜದ  ಕಟ್ಟಡದ ಸಭಾ ಕಾರ್ಯಕ್ರಮದ ಉದ್ಘಾಟನೆ.  | Kannada Prabha

ಸಾರಾಂಶ

ನಿಸರ್ಗ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ದೈವಜ್ಞ ಬ್ರಾಹ್ಮಣ ಸಮಾಜದ ಕಟ್ಟಡದ ಸಭಾ ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಪೊನ್ನಣ್ಣ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ವಿರಾಜಪೇಟೆಯ ನಿಸರ್ಗ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ದೈವಜ್ಞ ಬ್ರಾಹ್ಮಣ ಸಮಾಜದ ಕಟ್ಟಡದ ಸಭಾ ಕಾರ್ಯಕ್ರಮ ಉದ್ಘಾಟನೆಯನ್ನು ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ನೆರವೇರಿಸಿದರು.

ನಂತರ ಮಾತನಾಡಿದ ಅವರು ದೈವಜ್ಞ ಸಮಾಜದ ಕೊಡುಗೆ ಈ ನಾಡಿಗೆ ಅಪಾರವಾದದ್ದು, ಕಲೆ ಸಾಹಿತ್ಯ ಸಂಸ್ಕೃತಿಯಲ್ಲಿ ಈ ಸಮಾಜದ ಹಲವರು ತೊಡಗಿಸಿಕೊಂಡು ಸಮಾಜಮುಖಿ ಕಾರ್ಯವನ್ನು ಮಾಡಿದ್ದಾರೆ. ಈ ಸಮಾಜದ ಏಳಿಗೆಗಾಗಿ ತಾನು ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜಾ ಉತ್ತಪ್ಪ ಭಾಗವಹಿಸಿ ಮಾತನಾಡಿ ಶುಭ ಕೋರಿದರು.

ದೈವಜ್ಞ ಸಮಾಜ ದಕ್ಷಿಣ ಕೊಡಗು ಇದರ ಅಧ್ಯಕ್ಷರಾದ ಉಲ್ಲಾಸ್ ಸಿ. ಶೇಟ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಪುರಸಭಾ ಪುರಸಭಾ ಸದಸ್ಯರಾದ ಅನಿತಾ ಕುಮಾರ, ಅಖಿಲ ಕರ್ನಾಟಕ ದೈವಜ್ಞ ಸಮಾಜದ ಅಧ್ಯಕ್ಷರಾದ ರವಿ ಎಸ್ ಗಾಂವ್ಕರ್, ಅಖಿಲ ಕರ್ನಾಟಕ ಮಹಿಳಾ ಸಮಾಜ ಅಧ್ಯಕ್ಷರಾದ ವಿನಯ ಆರ್ ರಾಯ್ಕರ್, ಮಂಗಳೂರಿನ ದೈವಘ್ನ ಸೌರಭ ಪತ್ರಿಕೆಯ ಸಂಪಾದಕರಾದ ಪ್ರಶಾಂತ್ ಶೇಟ್, ದೈವಿಜ್ಞ ಬ್ರಾಹ್ಮಣರ ಸಂಘದ ಸ್ಥಾಪಕ ಅಧ್ಯಕ್ಷರಾದ ಎಂ.ಜಿ ಮೋಹನ್, ಮಾಜಿ ಅಧ್ಯಕ್ಷರಾದ ಎಂ.ಜಿ ಉಲ್ಲಾಸ್, ಹಾಲಿ ಪ್ರಧಾನ ಕಾರ್ಯದರ್ಶಿಯಾದ ಬಿ.ಎಸ್ ಬಾಲಕೃಷ್ಣ ಹಾಗೂ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದಲ್ಲಿ ಇದುವರೆಗೆ ದುಡಿದ ಮಹನೀಯರಿಗೆ ಸನ್ಮಾನ ಹಾಗೂ ಕಟ್ಟಡ ನಿರ್ಮಾಣಕ್ಕೆ ಧನಸಹಾಯ ನೀಡಿದವರಿಗೆ ಗೌರವ ಅರ್ಪಣೆ ಮಾಡಲಾಯಿತು.

ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ಭಾನುವಾರ ಬೆಳಗ್ಗೆ ನೂತನ ಕಟ್ಟಡದ ಉದ್ಘಾಟನೆಯನ್ನು ಕರ್ಕಿ ಮಠದ, ಜ್ಞಾನೇಶ್ವರಿ ಪೀಠ ದೈವಜ್ಞ ಬ್ರಾಹ್ಮಣರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ನೆರವೇರಿಸಿ ಆಶೀರ್ವಚನ ನೀಡಿದರು.

ಸಭಾ ಕಾರ್ಯಕ್ರಮದ ನಂತರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ