ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Feb 13, 2025, 12:51 AM IST
32 | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಳ್ಳಾಲ

ಸಾಹಿತ್ಯ ಸಮ್ಮೇಳನಗಳು ಸಾಹಿತ್ಯ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಊರಿನ ಜನರಲ್ಲಿ ಕನ್ನಡಾಭಿಮಾನ ಹೆಚ್ಚಿಸಬೇಕು ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಇದರ ವತಿಯಿಂದ ಫೆ.21, 22 ರಂದು ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ನಡೆಯುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ‌ ಆಹ್ವಾನ ಪತ್ರಿಕೆಯನ್ನು ಬುಧವಾರ ವಿ.ವಿ.ಯ ಹಳೆಸೆನೆಟ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು, ಸಾಹಿತಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರ ಒಗ್ಗೂಡಿಕೆ , ಪಾಲ್ಗೊಳ್ಳುವಿಕೆಯೆ ಮೂಲಕ ಯಶಸ್ವಿಯಾಗಿ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಸಮಿತಿಯ ಸಂಘಟಕರು, ಪದಾಧಿಕಾರಿಗಳ ಪಾತ್ರವು ಅತ್ಯಂತ ಮಹತ್ತರವಾದುದು. ಉಳ್ಳಾಲದಲ್ಲಿ ನಡೆಯುತ್ತಿರುವ ಜಿಲ್ಲಾ ಸಮ್ಮೇಳನವನ್ನು ರಾಜ್ಯಕ್ಕೆ ಮಾದರಿಯಾಗುವಂತೆ ಸಂಘಟಿಸಬೇಕು ಎಂದರು.

ಮಂಗಳೂರು ವಿ.ವಿ. ಕುಲಸಚಿವ ರಾಜು ಮೊಗವೀರ ಕೆ, ಮೂಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಾಥ್ ಹೆಗ್ಡೆ, ಶಿಶು ಇಲಾಖೆಯ ಅಧಿಕಾರಿ ಶೈಲಜಾ ಕಾರಂಗಿ, ಶಿಕ್ಷಣ ಇಲಾಖೆಯ ಈಶ್ವರ್ , ಕೋಟೆಕಾರ್ ಪಟ್ಟಣ ಪಂಚಾಯತಿಯ ಮಾಲಿನಿ,‌ ಕೊಣಾಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಗೀತಾ ದಾಮೋದರ್ ಕುಂದರ್, ಉಳ್ಳಾಲ ನಗರ ಸಭೆಯ ಆಯುಕ್ತರಾದ ಮತ್ತಡಿ ಮತ್ತಿತರರಿದ್ದರು.

ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್ ಅವರು ಸ್ವಾಗತಿಸಿದರು. ತ್ಯಾಗಂ ಹರೇಕಳ ನಿರೂಪಿಸಿದರು. ಲಯನ್ ಚಂದ್ರಹಾಸ ಶೆಟ್ಟಿ ವಂದಿಸಿದರು

ಸಮ್ಮೇಳನದಲ್ಲಿ ವಿವಿಧ ಲೇಖಕರ ಒಟ್ಟು 18 ಪುಸ್ತಕಗಳು ಬಿಡುಗಡೆಗೊಳ್ಳಲಿವೆ. ಮಂಗಳ ಸಭಾಂಗಣದ ಆವರಣದಲ್ಲಿ ವಿವಿಧ ಪುಸ್ತಕ, ಆಹಾರ ಮಳಿಗೆಗಳು ಸೇರಿದಂತೆ‌ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಸಾರುವ ವಸ್ತುಪ್ರದರ್ಶನ ನಡೆಯಲಿದೆ.

ಗ್ರಾಮಗಳಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?