ಮೂಡುಬಿದಿರೆ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ ‘ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಇತ್ತೀಚೆಗೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು.ಮಂಗಳೂರು ವಿವಿ ಕಾಲೇಜಿನ ಡಾ. ಮಾಧವ ಎಂ.ಕೆ. ಮಾತನಾಡಿ, ಗ್ರಂಥಾಲಯ ವಿಭಾಗದಲ್ಲಿ ಕೆಲಸ ಮಾಡುವವರು ಸರಸ್ವತಿಯ ದಾಸೋಹಿಗಳು. ಅವರ ಸೇವೆ ಅಕ್ಷರಶಃ ಮಾನವ ಸಮಾಜದ ಬೆಳಕಿನ ದೀಪ ಎಂದರು.ಆಳ್ವಾಸ್ ಕಾಲೇಜಿನ ಪ್ರಾಚಾರ‍್ಯ ಕುರಿಯನ್ ಮಾತನಾಡಿ, ಜಗತ್ತಿನ ಎಲ್ಲಾ ಸಾಧನೆಯ ಹಿಂದೆ ಗ್ರಂಥಾಲಯದ ಪಾತ್ರವಿದೆ. ವಿದ್ಯಾರ್ಥಿಗಳು ಕುವೆಂಪು, ಬೇಂದ್ರೆ, ಮಾಸ್ತಿಯನ್ನು ಓದಿಕೊಂಡು ಜ್ಞಾನದ ವರ್ಜನೆಗೆ ಶ್ರಮಿಸಬೇಕು ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಾಧನಗಳ ಬಳಕೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಗಮನ ಗ್ರಂಥಾಲಯದಿಂದ ದೂರವಾಗುತ್ತಿದೆ. ಇಂಟರ್ನೆಟ್, ಮೊಬೈಲ್, ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಸಮಯವನ್ನು ಆಕ್ರಮಿಸಿವೆ. ಈ ಹಿನ್ನೆಲೆ, ವಿದ್ಯಾರ್ಥಿಗಳನ್ನು ಪುನಃ ಗ್ರಂಥಾಲಯದತ್ತ ಸೆಳೆಯುವ ನವೀನ ಕಾರ್ಯಯೋಜನೆಗಳನ್ನು ರೂಪಿಸುವುದು ಕಾಲದ ಅವಶ್ಯಕತೆ ಎಂದರು.ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳ ಗ್ರಂಥಾಪಾಲಕರ ಸಂಘದ ನ್ಯೂಸ್ ಬುಲೆಟಿನ್ ಬಿಡುಗಡೆಗೊಳಿಸಲಾಯಿತು. ಸಂಘದ ನಿವೃತ್ತ ಗ್ರಂಥಪಾಲಕ ಬೆಸೆಂಟ್ ಕಾಲೇಜಿನ ಪ್ರೊ. ವಾಸಪ್ಪ ಗೌಡ, ಮಾಹೆಯ ಲೀಲಾವತಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಾಪಕ ಭೂಷಣ ಪ್ರಶಸ್ತಿ ವಿಜೇತೆರಾದ ಯಶೋಧಾ ಹಾಗೂ ವಿಜಯಲತಾ, ಶಿಕ್ಷಣಾ ಇಲಾಖೆಯಿಂದ ರಾಜ್ಯ ಮಟ್ಟದ ಅತ್ಯುತ್ತಮ ಗ್ರಂಥಪಾಲಕಿ ಪ್ರಶಸ್ತಿ ವಿಜೇತೆ ರಂಜಿತಾ ಸಿ, ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಅದಿಥಿ, ಈ ವರ್ಷ ಪಿಎಚ್‌ಡಿ ಪದವಿ ಪಡೆದ ಡಾ ಪ್ರೇಮಾ, ಡಾ ಲೋಕೇಶ್ ಹಾಗೂ ಡಾ ಲೋಕನಾಥ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಕಾಲೇಜಿನ ಗ್ರಂಥಾಲಯ ವಿಭಾಗ ಅಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದರಿಗೆ ಬಹುಮಾನ ವಿತರಿಸಲಾಯಿತು.ಮೈಸೂರು ವಿವಿಯ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ ಆದಿತ್ಯ ಕುಮಾರಿ ಎಚ್, ಆಳ್ವಾಸ್ ಕಾಲೇಜಿನ ಮುಖ್ಯ ಗ್ರಂಥಾಪಾಲಕಿ ಶ್ಯಾಮಲತಾ ಇದ್ದರು.ಕಾರ್ಯಾಗಾರದಲ್ಲಿ ಸಂಘದ 85ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡರು.ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳ ಗ್ರಂಥಾಪಾಲಕರ ಸಂಘದಅಧ್ಯಕ್ಷೆ ಡಾ ರೇಖಾ ಡಿ ಪೈ ಸ್ವಾಗತಿಸಿದರು. ಕಾರ್ಯದರ್ಶಿ ಡಾ ವನಜಾ ಬಿ ವಂದಿಸಿದರು. ಸದಸ್ಯೆ ಡಾ ಸುಜಾತಾ ನಿರೂಪಿಸಿದರು.