ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಶೋಕ್‌ ಪೂಜಾರ್‌ ಆಯ್ಕೆ

KannadaprabhaNewsNetwork |  
Published : Feb 08, 2026, 03:15 AM IST
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಮೂಲ್ಕಿಯ ಅಶೋಕ್‌ ಪೂಜಾರ್‌ ಆಯ್ಕೆ  | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಮೂಲ್ಕಿಯ ಯುವ ರಾಜಕೀಯ- ಸಾಮಾಜಿಕ ನೇತಾರ, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಯುವ ನಾಯಕ ಅಶೋಕ್ ಪೂಜಾರ್ ಆಯ್ಕೆ

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಮೂಲ್ಕಿಯ ಯುವ ರಾಜಕೀಯ- ಸಾಮಾಜಿಕ ನೇತಾರ, ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಯುವ ನಾಯಕ ಅಶೋಕ್ ಪೂಜಾರ್ ಆಯ್ಕೆಯಾಗಿದ್ದಾರೆ.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಟ್ ಅವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿಗಳಾದ ನಿಗಮ್ ಭಂಡಾರಿಯವರ ಅನುಮೋದನೆಯೊಂದಿಗೆ ಅಶೋಕ ಪೂಜಾರ, ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ(ಎಸ್.ಸಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅಶೋಕ್ ಪೂಜಾರ್ ಅವರು ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿ, ಮೂಲ್ಕಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸಮಾಜವನ್ನು ಸಂಘಟಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ಯುವ ನಾಯಕರಾಗಿ ದುಡಿಯುತ್ತಿದ್ದಾರೆ. ಸಾಮಾಜಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿದ್ದಾರೆ. ಮಾಜಿ ಸಚಿವ ಕೆ ಅಭಯಚಂದ್ರ ಜೈನ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ ಅವರ ಮಾರ್ಗದರ್ಶನದಿಂದ ಜವಾಬ್ದಾರಿ ಸಿಕ್ಕಿದ್ದು ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲ ರೀತಿಯಲ್ಲಿ ಪ್ರಾಮಾಣಿಕನಾಗಿ ದುಡಿಯುವುದಾಗಿ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು