ಬೆಳ್ತಂಗಡಿ: ಫೇಸ್‌ಬುಕ್ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ದೂರು ನೀಡಿದ್ದಾರೆ. ಮಟ್ಟಣ್ಣವರ್ ಅವರು ಅಪರಾಧಿಕ ಕೃತ್ಯ ನಡೆಸಲು, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಚರಣ್ ಶೆಟ್ಟಿ ಅವರು ಮಹೇಶ್ ತಿಮರೋಡಿ ವಿರುದ್ಧ ದೂರು ನೀಡಿದ್ದಾರೆ.
ತಿಮರೋಡಿ ಅವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‌ನಲ್ಲಿ ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.