ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌

Published : Jun 03, 2025, 05:01 AM IST
RSS leader Kalladka Prabhakar Bhat (Photo/ANI)

ಸಾರಾಂಶ

ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

 ಬಂಟ್ವಾಳ : ಹಿಂದೂ ಮುಖಂಡ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ಶ್ರದ್ಧಾಂಜಲಿ ಸಭೆ ನಡೆದಿತ್ತು. ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ ಭಟ್‌ ಭಾಗವಹಿಸಿ ಮಾಡಿ ಭಾಷಣದಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೋಮವಾರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 353(2)ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್‌ ಹೇಳಿದ್ದೇನು?

ಈ ಶ್ರದ್ಧಾಂಜಲಿ ಭಾವಪೂರ್ಣ ಅಲ್ಲ, ಪ್ರತೀಕಾರ ಪೂರ್ಣ ಅಥವಾ ಹೋರಾಟ ಪೂರ್ಣ ಶ್ರದ್ಧಾಂಜಲಿ. ಸುಮ್ಮನೆ ಬಂದು ಅಳುವುದು, ಅವನ ಬಗ್ಗೆ ಶಬ್ದ ಹೇಳೋದು, ಹೂವಿನ ಎಸಳು ಹಾಕೋದಲ್ಲ. ಅಷ್ಟಕ್ಕೇ ಅದು ಮುಗಿಯಲ್ಲ. ಇದು ಸಾವಿರಾರು ವರ್ಷಗಳ ಹೋರಾಟ, ಅದನ್ನು ನೆನಪಿಟ್ಟುಕೊಳ್ಳಿ ಎಂದು ಪ್ರಭಾಕರ್‌ ಭಟ್‌ ಹೇಳಿದ್ದರು ಎಂದು ಆರೋಪಿಸಲಾಗಿದೆ.

PREV
Read more Articles on

Recommended Stories

ಆತ್ಮಹ* ಮಾಡಿಕೊಳ್ಳಲು ದರ್ಶನ್‌ ತಾಯಿ ಧರ್ಮಸ್ಥಳಕ್ಕೆ ಬಂದಿದ್ರು : ಸ್ಥಳೀಯ
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು