ಅಜ್ಜಿಯ ಇಷ್ಟ ತಂದಿತು ಸಂಕಷ್ಟ : ಅಜ್ಜಿ ತಿಥಿಗೆ ಆಮೆ ಬೇಟೆ ಆಡಿದವರ ಸೆರೆ

Published : Feb 16, 2026, 10:26 AM IST
turtle

ಸಾರಾಂಶ

ಅಜ್ಜಿಯ ತಿಥಿ ಕಾರ್ಯಕ್ಕೆ ಮಾಂಸಾಹಾರ ಮಾಡಲು ನದಿಯಲ್ಲಿ ಆಮೆ ಬೇಟೆಯಾಡಿ ಮಾಂಸ ಸುಡುವಾಗ ನಾಲ್ವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ(42), ರಾಜೇಂದ್ರ (54), ವಿಘ್ನೇಶ್ (32), ಪ್ರಶಾಂತ್(35) ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಅಜ್ಜಿಯ ತಿಥಿ ಕಾರ್ಯಕ್ಕೆ ಮಾಂಸಾಹಾರ ಮಾಡಲು ನದಿಯಲ್ಲಿ ಆಮೆ ಬೇಟೆಯಾಡಿ ಮಾಂಸ ಸುಡುವಾಗ ನಾಲ್ವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ(42), ರಾಜೇಂದ್ರ (54), ವಿಘ್ನೇಶ್ (32), ಪ್ರಶಾಂತ್(35) ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಗರದ ಸೋಮಾವತಿ ನದಿಯಲ್ಲಿ ನಾಲ್ಕು ಆಮೆಯನ್ನು ಬೇಟೆಯಾಡಿ ನದಿ ತಟದಲ್ಲಿ ಮಾಂಸ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಮ ಬಳಿಕ ದಾಳಿ ಮಾಡಿ ಆಮೆಯನ್ನು ಜಪ್ತಿ ಮಾಡಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ ಪೊಲೀಸರು ದಾಳಿ

ತಕ್ಷಣ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿದ್ದು, ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಿ 14 ರಂದು ರಾತ್ರಿ ಬಿಡುಗಡೆ ಮಾಡಿದ್ದಾರೆ.

ಅಜ್ಜಿಯ ಇಷ್ಟ ತಂದಿತು ಸಂಕಷ್ಟ:

ಆರೋಪಿಗಳು ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಸಂಬಂಧಿ ಅಜ್ಜಿಯ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13ರಂದು ಆಗಮಿಸಿದ್ದರು. ಮರುದಿನ ಅಜ್ಜಿಗೆ ಇಷ್ಟವಾದ ಆಮೆ ಮಾಂಸ ಮಾಡಲೆಂದು ಬೆಳ್ತಂಗಡಿಯ ಸೋಮವತಿ ನದಿಗೆ ಬೇಟೆ ಆಡಿದ್ದಾರೆ. ಅಲ್ಲಿಯೇ ಮಾಂಸ ಸುಡುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ಮಂಜೇಶ್ವರ ಅಭ್ಯರ್ಥಿ ಸುರೇಂದ್ರನ್ ಪರವಾಗಿ ರಾಜೇಶ್ ನಾಯ್ಕ್ ಮತಯಾಚನೆ
ಡಾ. ಮೋಹನ ಆಳ್ವರಿಗೆ, ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್