ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!

Published : Feb 13, 2026, 11:51 AM IST
school tour in tipper lorry

ಸಾರಾಂಶ

ಪಿಕಪ್ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

 ಬೆಳ್ತಂಗಡಿ :  ಪಿಕಪ್ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸ

ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಬಳಂಜ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಸಮೀಪದ ಫಾರ್ಮ್‌ಗೆ ಕರೆದುಕೊಂಡು ಹೋಗಲಾಗಿತ್ತು.

ವಿಡಿಯೋ ಸಹ ವೈರಲ್‌

ಅದರ ವಿಡಿಯೋ ಸಹ ವೈರಲ್‌ ಆಗಿತ್ತು. ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಪಡೆದು ಅದನ್ನು ಮಂಗಳೂರು ಡಿಡಿಪಿಐ ಶಶಿಧರ್.ಜಿ.ಎಸ್.ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ಪ್ರತಿಭಟನೆ ಬಳಿಕ ಅರ್ಧ ತಾಸಿನೊಳಗೆ ಕಾಮಗಾರಿ
ಹಾಸ್ಟೆಲ್ ಕಟ್ಟಡಗಳಿಗೆ ತ್ವರಿತ ಜಮೀನು ಮಂಜೂರು: ಉಸ್ತುವಾರಿ ಕಾರ್ಯದರ್ಶಿ ಸೂಚನೆ