ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ

Published : Aug 05, 2025, 10:45 AM IST
dharmasthala

ಸಾರಾಂಶ

ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್‌ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮೆಮೊದಲ್ಲಿ ಕೋರಿದ್ದರು.

 ಬೆಂಗಳೂರು :  ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪಕ್ಕೆ ಸಂಬಂಧಿಸಿ ಧರ್ಮಾಧಿಕಾರಿ‌ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಕೋರಿದ್ದ ಅಸಲು ದಾವೆಯ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್‌ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್ ರೈ ಕೋರಿದ್ದಾರೆ.

ಪ್ರಕರಣ ಸಂಬಂಧ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶಿಸುವಂತೆ ಕೋರಿ ಕೋರಿ ಡಿ.ಹರ್ಷೇಂದ್ರ ಕುಮಾರ್‌ ಅವರು ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ಗೆ ಅಸಲು ದಾವೆ ಸಲ್ಲಿಸಿದ್ದರು. ಅದನ್ನು 2025ರ ಜು.18ರಂದು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿಜಯ್‌ಕುಮಾರ್‌ ರೈ ಅವರು, ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ನಿರ್ಬಂಧಕಾಜ್ಞೆ ಹೊರಡಿಸಿತ್ತು.

ಇದರಿಂದ ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಹಾಗೂ ಬೈರಪ್ಪ ಹರೀಶ್ ಕುಮಾರ್ ಮಧ್ಯಂತರ ಮೆಮೊ ಸಲ್ಲಿಸಿದ್ದರು. ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್‌ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮೆಮೊದಲ್ಲಿ ಕೋರಿದ್ದರು.

ಅದನ್ನು ಪರಿಗಣಿಸಿದ ನ್ಯಾಯಾಧೀಶ ರೈ ಅವರು, ತಮ್ಮ ಮುಂದಿರುವ ಹರ್ಷೇಂದ್ರ ಕುಮಾರ್‌ ಅವರ ಅಸಲು ದಾವೆಯ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಪ್ರಧಾನ ನ್ಯಾಯಾಧೀಶರಿಗೆ ಕೋರಿದ್ದಾರೆ.

PREV
Read more Articles on

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾವಂಜೆ: ನೇಗಿಲ ಯೋಗ ಕೃಷಿ ನಿನಾದ ಕಾರ್ಯಕ್ರಮ