ಮಂಗಳೂರು ಕ್ಯಾಬ್ ಚಾಲಕಗೆ ಉಗ್ರ ಎಂದ ಕೇರಳ ನಟ ವಶಕ್ಕೆ

Published : Oct 12, 2025, 09:52 AM IST
Malayalam actor Jayakrishnan police custody

ಸಾರಾಂಶ

ಟ್ಯಾಕ್ಸಿ ಚಾಲಕನಿಗೆ ಮೊಬೈಲ್‌ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವ ಪೊಲೀಸರು ಶನಿವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ

 ಮಂಗಳೂರು: ಟ್ಯಾಕ್ಸಿ ಚಾಲಕನಿಗೆ ಮೊಬೈಲ್‌ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವ ಪೊಲೀಸರು ಶನಿವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂ ಕೂಡ ಪೊಲೀಸರ ವಶದಲ್ಲಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ.

ಶುಕ್ರವಾರ ರಾತ್ರಿ ಮಂಗಳೂರಿಗೆ ಬಂದಿದ್ದ ನಟ ಜಯಕೃಷ್ಣನ್ ಸೇರಿದಂತೆ ಮೂವರು ಉಬರ್ ಮತ್ತು ರ‍್ಯಾಪಿಡೊ ಕ್ಯಾಪ್ಟನ್‌ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು. ವಾಹನ ಹತ್ತುವ ಸ್ಥಳವನ್ನು ಬಿಜೈ ನ್ಯೂ ರೋಡ್‌ ಎಂದು ನಮೂದಿಸಿದ್ದರು. ನಾನು ಆ್ಯಪ್‌ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದ್ದೆ. ಆಗ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯು ನನಗೆ ‘ಮುಸ್ಲಿಂ ಉಗ್ರವಾದಿ, ಟೆರರಿಸ್ಟ್’ ಎಂದು ಅಪಹಾಸ್ಯವಾಗಿ ಮಾತನಾಡಿದ್ದ. ಅಲ್ಲದೆ ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ನನ್ನ ತಾಯಿಗೆ ಅವಾಚ್ಯವಾಗಿ ಬೈದಿದ್ದಾನೆ ಎಂದು ಆರೋಪಿಸಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ಉರ್ವ ಪೊಲೀಸರಿಗೆ ದೂರು ನೀಡಿದ್ದರು.

ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ನಾನಲ್ಲ, ವಿಮಲ್‌ ಬೈದಿರುವುದಾಗಿ ಹೇಳಿರುವುದರಿಂದ ನಟನ ವಾಯ್ಸ್ ಸ್ಯಾಂಪಲ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

PREV
Get the latest news from Dakshina Kannada (ದಕ್ಷಿಣ ಕನ್ನಡ ಸುದ್ದಿ) — covering coastal city Mangaluru, local governance, beaches & tourism, culture & traditions (Yakshagana, Kambala), education, industry and agriculture, environment, civic issues, and community events from the district on Kannada Prabha News.
Read more Articles on

Recommended Stories

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಅಪಾಯ: ಸಂಸದ ಬ್ರಿಜೇಶ್ ಚೌಟ ಆತಂಕ
ಮಂಗಳೂರು ಮೀನುಗಾರಿಕಾ ಕಾಲೇಜಿನಲ್ಲಿ ರಾಷ್ಟ್ರೀಯ ಕಾರ್ಯಾಗಾರ