ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ : ಡಿಕೆಶಿ

Published : Aug 29, 2025, 05:19 AM IST
Dk Shivakumar

ಸಾರಾಂಶ

ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 ಬೆಂಗಳೂರು :  ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸದನದಲ್ಲಿ ಆರ್‌ಎಸ್‌ಎಸ್‌ ಪ್ರಾರ್ಥನೆ, ಚಾಮುಂಡೇಶ್ವರಿ ದೇವಸ್ಥಾನ ಕುರಿತ ಹೇಳಿಕೆಗಳು ಸೇರಿ ಪದೇಪದೆ ತಮ್ಮ ಹೇಳಿಕೆಗಳು ವಿವಾದಕ್ಕೀಡಾಗುತ್ತಿವೆ. ಹೀಗಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದಿರಲು ತೀರ್ಮಾನಿಸಿರುವ ಅವರು ಇಂಥದ್ದೊಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಪ್ರತಿಕ್ರಿಯೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಶಿವಕುಮಾರ್‌, ನಾನು ಸದನ ಸೇರಿ ಎಲ್ಲಿಯೇ ಮಾತನಾಡಿದರೂ ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಕೆಲವರ ಕೆಲಸವಾಗಿದೆ. ರಾಜಕೀಯದವರು, ಮಾಧ್ಯಮಗಳು, ರಾಜಮನೆತನದ ಪ್ರಮೋದಾದೇವಿ, ಸಂಸದ ಯದುವೀರ್‌ ಹೀಗೆ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಎಂದೆನಿಸುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಲು ಬೇರೆ ನಾಯಕರು ಮತ್ತು ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಕೇಳಿ ಎಂದು ಹೇಳಿದರು.

PREV
Read more Articles on

Recommended Stories

ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌