ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

ಸಾರಾಂಶ

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ನವದೆಹಲಿ: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ತನಿಖೆ ಪೂರ್ಣಗೊಳ್ಳುವ ಮೊದಲೇ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದ ಹೈಕೋರ್ಟ್‌ ನಿರ್ಧಾರವನ್ನು ಪ್ರಶ್ನಿಸಿ ಹೈದರ್ ಅಲಿ ಎನ್ನುವವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆಯೇನು?: 2023ರಲ್ಲಿ ದಕ್ಷಿಣ ಕನ್ನಡ ಕಡಬದ ಬದ್ರಿಯಾ ಜುಮಾ ಮಸೀದಿಯಲ್ಲಿ ಇಬ್ಬರು ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗಿದ್ದರು. ಮುಸ್ಲಿಮರಿಗೆ ಬೆದರಿಕೆ ಹಾಕಿ ‘ಬ್ಯಾರಿ (ಮುಸ್ಲಿಂ)ಗಳನ್ನು ಶಾಂತಿಯಿಂದ ಬದುಕಲು ಬಿಡುವುದಿಲ್ಲ’ ಎಂದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದರಿಂದ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದಿಲ್ಲ. ಈ ರೀತಿ ಕೂಗುವುದು ತಪ್ಪಲ್ಲ’ ಎಂದು ಹೇಳಿ ಪ್ರಕರಣವನ್ನು ರದ್ದುಗೊಳಿಸಿತ್ತು.

Share this article