ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ : ಹವಾಮಾನ ಇಲಾಖೆ

Published : Mar 03, 2025, 10:07 AM IST
Heat Waves Records

ಸಾರಾಂಶ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

   ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಕಳೆದ ನಾಲ್ಕೈದು ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಲ್ಲಿ ಉಷ್ಣ ಅಲೆ ಭೀತಿ ಇದ್ದು, ಮುಂದಿನ ಎರಡು ದಿನ ಇದೇ ಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅತಿ ಹೆಚ್ಚು 38.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 4.8 ಡಿ.ಸೆ. ಹೆಚ್ಚಾಗಿದೆ. ಹೊನ್ನಾವರದಲ್ಲಿಯೂ 36.6 ಡಿ.ಸೆ. ಗರಿಷ್ಠ ಉಷ್ಣಾಂಶ (ವಾಡಿಕೆಗಿಂತ 3.9 ಹೆಚ್ಚು) ದಾಖಲಾಗಿದೆ. ಮಂಗಳೂರಿನಲ್ಲಿ ಗರಿಷ್ಠ 36.3 ಡಿ.ಸೆ.(ವಾಡಿಕೆಗಿಂತ 2.4 ಹೆಚ್ಚು). ಪಣಂಬೂರಿನಲ್ಲಿ 36.7 ಡಿ.ಸೆ. ಗರಿಷ್ಠ ಉಷ್ಣಾಂಶ (3.4 ಡಿ.ಸೆ ಹೆಚ್ಚು) ದಾಖಲಾಗಿದೆ.

ತೀವ್ರ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆ ನಡುವೆ ಬಿಸಿಲಿಗೆ ಹೋಗುವುದು ತಪ್ಪಿಸಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆ ಧರಿಸಿ, ತಲೆ ಮುಚ್ಚಿಕೊಳ್ಳುವಂತೆ ಟೋಪಿ, ಬಟ್ಟೆ, ಛತ್ರಿ ಬಳಕೆ ಮಾಡುವಂತೆ ಸಲಹೆ ನೀಡಿದೆ. ಉಳಿದಂತೆ ರಾಜ್ಯದಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

PREV

Recommended Stories

ವಿದ್ಯುತ್ ತಂತಿಯಡಿ ಗಿಡ ನೆಡುವುದಕ್ಕೆ ಆಕ್ಷೇಪ
ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ