ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಚಿಕ್ಕಮಗಳೂರಿಗೆ ಶುಕ್ರವಾರ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಡಾ। ಜಿ.ಪರಮೇಶ್ವರ್ ಅವರನ್ನೇ ಮುಖ್ಯಮಂತ್ರಿ ಆಗಿ ಹೈಕಮಾಂಡ್ ನೇಮಿಸಬೇಕು ಎಂಬ ಘೋಷಣೆ ಕೇಳಿ ಬಂದಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಚಿಕ್ಕಮಗಳೂರಿಗೆ ಶುಕ್ರವಾರ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಡಾ। ಜಿ.ಪರಮೇಶ್ವರ್ ಅವರನ್ನೇ ಮುಖ್ಯಮಂತ್ರಿ ಆಗಿ ಹೈಕಮಾಂಡ್ ನೇಮಿಸಬೇಕು ಎಂಬ ಘೋಷಣೆ ಕೇಳಿ ಬಂದಿದೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್‌ಗೆ ಹಿರೇಮಗಳೂರು ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಸಂಘಟನೆಗಳ ಪದಾಧಿಕಾರಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ, ಡಾ। ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಘೋಷಣೆ ಕೂಗಿದರು.
ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿಯಾಗಿ ಡಾ। ಜಿ.ಪರಮೇಶ್ವರ್ ಅವರನ್ನು ನೇಮಿಸಬೇಕು. ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಗೆಲ್ಲಿಸಿದ್ದೇವೆ. ಡಾ। ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲೇಬೇಕೆಂದು ಆಗ್ರಹಿಸಿದರು.----
‘ಹೈ’ಗೆ ಬಿಟ್ಟ ವಿಚಾರ
ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ತೀರ್ಮಾನ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಇದರಲ್ಲಿ ಆಸೆ ಪ್ರಶ್ನೆ ಬರುವುದಿಲ್ಲ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.