ಪ್ಯಾಕೇಜ್ ಟೆಂಡರ್‌ ಕೈಬಿಡಲು ದಲಿತ ಗುತ್ತಿಗೆದಾರರ ಆಗ್ರಹ

KannadaprabhaNewsNetwork |  
Published : Sep 29, 2025, 01:04 AM IST
೨೭ಕೆಎಲ್‌ಆರ್-೪ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಾರ್ಜೇನಹಳ್ಳಿ ವಿ.ಬಾಬು ಮಾತನಾಡಿದರು. | Kannada Prabha

ಸಾರಾಂಶ

ಕೋಲಾರ ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೨೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ, ಸರ್ಕಾರದ ಆದೇಶದಂತೆ ಎಸ್ಸಿ ಎಸ್ಟಿ ಗುತ್ತಿಗೆದಾರರಿಗೆ ಶೇ.೨೪.೦೧ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ.೧೯ ಮೀಸಲಾತಿ ಜಾರಿ ಮಾಡಬೇಕು

ಕನ್ನಡಪ್ರಭ ವಾರ್ತೆ ಕೋಲಾರಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಮೀಸಲಾತಿ ಪರಿಪಾಲನೆ ಮಾಡದೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಗ್ಗೂಡಿಸಿ ಪ್ಯಾಕೇಜ್ ಮಾಡಿ ಟೆಂಡರ್ ಮಾಡಿದ್ದರಿಂದ ಜಿಲ್ಲೆಯ ಸಾಮಾನ್ಯ ಗುತ್ತಿಗೆದಾರರಿಗೆ ಅನ್ಯಾಯವಾಗಿದ್ದು ಕೂಡಲೇ ಪ್ಯಾಕೇಜ್ ಟೆಂಡರ್ ಕೈಬಿಡಬೇಕು ಎಂದು ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಾರ್ಜೇನಹಳ್ಳಿ ವಿ.ಬಾಬು ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರ ರಚನೆಗೆ ಎಸ್ಸಿ ಎಸ್ಟಿ, ಹಿಂದುಳಿದ ಹಾಗೂ ಅಹಿಂದ ವರ್ಗಗಳ ಮತದಾರರು ಕಾರಣವಾಗಿದ್ದಾರೆ, ಆದರೆ ಇವತ್ತು ಸಂವಿಧಾನದ ಅಡಿಯಲ್ಲಿ ಗುತ್ತಿಗೆ ಮೀಸಲಾತಿ ಸಿಗುತ್ತಿಲ್ಲ ಎಂದರು.

ಗುತ್ತಿಗೆ ಮೀಸಲು ಉಲ್ಲಂಘನೆ

ಸರ್ಕಾರ ನೀಡಿರುವ ಕಾಮಗಾರಿ ಗುತ್ತಿಗೆ ಮೀಸಲು ಆದೇಶವನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮರ್ಪಕವಾಗಿ ಜಾರಿ ಮಾಡದೆ ವಂಚನೆ ಮಾಡುತ್ತಿದ್ದಾರೆ, ಜಿಲ್ಲೆಯಲ್ಲಿ ೫ ರಿಂದ ೬ ಕಾಮಗಾರಿಗಳನ್ನು ಒಂದು ಪ್ಯಾಕೇಜ್ ರೀತಿಯಲ್ಲಿ ಕಾಮಗಾರಿ ಮಾಡಿ ಅನುದಾನ ನೀಡಲು ಅಧಿಕಾರಿಗಳು ಟೆಂಡರ್ ಕರೆದಿದ್ದಾರೆ, ಬೇರೆ ಬೇರೆ ಜಿಲ್ಲೆಗಳ ಪ್ರಭಾವಿಗಳಿಗೆ ಟೆಂಡರ್ ನೀಡಿ ಜಿಲ್ಲೆಯ ಗುತ್ತಿಗೆದಾರರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೨೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ, ಸರ್ಕಾರದ ಆದೇಶದಂತೆ ಎಸ್ಸಿ ಎಸ್ಟಿ ಗುತ್ತಿಗೆದಾರರಿಗೆ ಶೇ.೨೪.೦೧ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ.೧೯ ಮೀಸಲಾತಿ ಜಾರಿ ಮಾಡಬೇಕು. ಆದರೆ ಸುಮಾರು ನಾಲ್ಕೈದು ಪ್ಯಾಕೇಜ್ ಟೆಂಡರ್ ಕರೆದು ನಮ್ಮಂತಹ ಸಾಮಾನ್ಯ ಗುತ್ತಿಗೆದಾರರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.ದಲಿತ ಗುತ್ತಿಗೆದಾರರಿಗೆ ವಂಚನೆ

ದಲಿತರು ಹಾಗೂ ಹಿಂದುಳಿದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ, ಆದರೆ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ನಮ್ಮಂತಹ ಗುತ್ತಿಗೆದಾರರನ್ನು ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಇದು ಮರಣ ಶಾಸನವಾಗಿದೆ, ಸಾಕಷ್ಟು ಬಾರಿ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ, ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು ಇಲ್ಲದೇ ಹೋದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.ಈ ಸಂದ್ರಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಜಯರಾಮ್, ಕಾರ್ಯದರ್ಶಿ ನರೇಶ್ ಕುಮಾರ್, ಮಾಲೂರು ತಾಲೂಕು ಅಧ್ಯಕ್ಷ ಅಂಬರೀಷ್, ಮುಖಂಡರಾದ ಚಲಪತಿ, ಮಂಜುನಾಥ್, ಶಿವಣ್ಣ, ಸಾಗರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ