ಏನಿದು ಪ್ರಕರಣ?- ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರಿಗೆ ಕ್ಷೌರದಂಗಡಿ, ಹೋಟೆಲ್‌ನಲ್ಲಿ ಪ್ರವೇಶ ಇರಲಿಲ್ಲ- ಇದನ್ನು ದಲಿತರು ಪ್ರಶ್ನಿಸಿದಾಗ 2014ರಲ್ಲಿ ಸವರ್ಣೀಯರು- ದಲಿತರ ನಡುವೆ ಜಗಳವಾಗಿತ್ತು ದ್ವೇಷ ಬೆಳೆದಿತ್ತು- ಗ್ರಾಮದ ಮಂಜುನಾಥ ಎಂಬ ಸವರ್ಣೀಯ ಸಮುದಾಯದ ವ್ಯಕ್ತಿ ಗಂಗಾವತಿಗೆ ಹೋಗಿದ್ದಾಗ ಹಲ್ಲೆಯಾಗಿತ್ತು- ಗ್ರಾಮದ ದಲಿತರೇ ಹಲ್ಲೆ ಮಾಡಿದ್ದಾರೆಂದು ಸವರ್ಣೀಯರು ದಲಿತರ ಮೇಲೆ ದೌರ್ಜನ್ಯ, ದಾಂಧಲೆ ನಡೆಸಿದ್ದರು- ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಗುಡಿಸಲಿನಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಹಾನಿಯಾಗಿರಲಿಲ್ಲ
ತೀರ್ಪು ತಿಳಿದು ಬಿಕ್ಕಿಬಿಕ್ಕಿ ಕಣ್ಣೀರಿಟ್ಟ ಕುಟುಂಬಸ್ಥರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಆರೋಪಿಗಳ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದ ಆವರಣದಲ್ಲಿ ಅವರೆಲ್ಲರೂ ಬಿಕ್ಕಿ ಬಿಕ್ಕಿ ಅಳುವ ದೃಶ್ಯ ಕಂಡು ಬಂತು. ಗ್ರಾಮದ ಬಹುತೇಕರು ನ್ಯಾಯಾಲಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿತ್ತು.---ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಈ ತೀರ್ಪು ನೀಡಿದ್ದು, ಅಸ್ಪೃಶ್ಯತೆ ಪ್ರಕರಣವೊಂದರಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರಿಗೆ ಜೀವಾವಧಿ ಶಿಕ್ಷೆಯಾಗಿರುವುದು ದೇಶದಲ್ಲೇ ಇದೇ ಮೊದಲು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾದವರೆಲ್ಲರೂ ಸವರ್ಣೀಯರಾಗಿದ್ದಾರೆ.
2014ರಲ್ಲಿ ಮರಕುಂಬಿ ಗ್ರಾಮದಲ್ಲಿ ಜಾತಿ ಸಂಘರ್ಷವಾಗಿತ್ತು. ಗ್ರಾಮದ ದಲಿತರಿಗೆ ಕ್ಷೌರದಂಗಡಿಯಲ್ಲಿ ಮತ್ತು ಹೋಟೆಲ್‌ನಲ್ಲಿ ಪ್ರವೇಶ ಇರಲಿಲ್ಲ. ಇದನ್ನು ಪ್ರಶ್ನಿಸಿದ್ದು ವಿವಾದಕ್ಕೆ ತಿರುಗಿ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ಇದಾದ ಮೇಲೆ ಗ್ರಾಮದ ಸವರ್ಣೀಯ ಯುವಕ ಮಂಜುನಾಥ ಎಂಬಾತ ಗಂಗಾವತಿಗೆ ಸಿನಿಮಾ ನೋಡಲು ಹೋಗಿದ್ದು, ಟಿಕೆಟ್ ಪಡೆಯುವ ವೇಳೆ ಆತನ ಮೇಲೆ ಹಲ್ಲೆ ನಡೆದಿತ್ತು. ಗ್ರಾಮಕ್ಕೆ ಆಗಮಿಸಿದ ಆತ ದಲಿತರು ಸೇರಿಕೊಂಡು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿದ್ದರಿಂದ ಸವರ್ಣೀಯರೆಲ್ಲರು ಸೇರಿ ಅಂದು ಸಂಜೆ ದಲಿತರ ಕೇರಿಗೆ ನುಗ್ಗಿ ದಾಂಧಲೆ ಮಾಡಿದ್ದಲ್ಲದೆ, ಕೇರಿಯ ಗುಡಿಸಲಿಗೆ ಬೆಂಕಿ ಹಚ್ಚಿದ್ದರು. ದಲಿತಪರ ಹೋರಾಟಗಾರ ಗಂಗಾಧರ ಸ್ವಾಮಿ ಮನೆಗೂ ನುಗ್ಗಿ ಹೊಡೆದಿದ್ದರು.
ಈ ಕುರಿತು ಭೀಮೇಶ್ ಎಂಬವರು ಆ.29, 2014ರಂದು ಗಂಗಾವತಿ ಪೊಲೀಸ್ ಠಾಣೆಯಲ್ಲಿ 98 ಆರೋಪಿಗಳು ಸೇರಿ ಇತರರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರು ಸ್ವೀಕಾರ ಮಾಡಿ ತನಿಖೆ ನಡೆಸಿದ್ದ ಪೊಲೀಸರು 117 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಮತ್ತೆ ಜೈಲಿಗೆ:
ಗ್ರಾಮದಲ್ಲಿ ಬಿಗಿ ಭದ್ರತೆ:
----
ಅಸ್ಪೃಶ್ಯತೆ ಪ್ರಕರಣದಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆಯಾಗಿರುವುದು ದೇಶದಲ್ಲಿಯೇ ಮೊದಲು ಅನಿಸುತ್ತದೆ. ನನ್ನ ಇಷ್ಟು ವರ್ಷಗಳ ಅನುಭವದಲ್ಲಿ ಇಷ್ಟು ಜನರಿಗೆ ಜೀವಾವಧಿ ಶಿಕ್ಷೆಯಾದ ಬೇರೆ ಉದಾಹರಣೆಗಳಿಲ್ಲ.- ಆಸಿಫ್ ಅಲಿ, ಆಲ್ ಇಂಡಿಯಾ ನೋಟರಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ