ಕನ್ನಡಪ್ರಭ ವಾರ್ತೆ ಕನಕಪುರ
ನಗರದ ಖಾಸಗಿ ಹೋಟೆಲ್‌ನಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ಕಂಡು ಕಾಣದಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ಕಳೆದ ಕೆಲವು ತಿಂಗಳುಗಳ ಹಿಂದೆ ನಗರದ ಮಳಗಾಳು ವಾರ್ಡ್‌ನಲ್ಲಿ ದಲಿತ ಯುವಕ ಅನೀಶ್ ಕುಮಾರ್ ಮೇಲೆ ನಡೆದ ಹಲ್ಲೆ ಯಲ್ಲಿ ತನ್ನ ಎಡಗೈ ಕಳೆದಕೊಂಡಿದ್ದು ರಾಜ್ಯ ಸರ್ಕಾರ ಆತನ ಕೈ ಜೋಡಣೆ ಹಾಗೂ ಚಿಕಿತ್ಸಾ ವೆಚ್ಚಕ್ಕಾಗಿ ಸುಮಾರು 13 ಲಕ್ಷ ರುಪಾಯಿಗಳನ್ನು ನೀಡಿದ್ದರೂ ಸಹ ಜಿಲ್ಲಾಧಿಕಾರಿಗಳು ನೊಂದ ಯುವಕನಿಗೆ ಅ ಪರಿಹಾರದ ಹಣವನ್ನು ಇದುವರೆಗೂ ನೀಡಿಲ್ಲ ಎಂದು ನೀಡದಿರುವುದು ಅವರು ದಲಿತರ ಮೇಲೆ ಇಟ್ಟಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.ಪರಿಹಾರದ ಹಣ ನೀಡದಿದ್ದರೂ ಸಹ ಜಿಲ್ಲಾಧಿಕಾರಿ ಯಶವಂತ್ ವಿ. ಗುರಿಕಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕೇವಲ ಪ್ರಚಾರಕ್ಕಾಗಿ ಪರಿಹಾರ ಹಣ ನೀಡಿರುವುದಾಗಿ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಕಾರ್ಯವೈಖರಿ ಹೇಗಿದೆ ಎಂದರೆ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾಗಿರುವ ಪ್ಯಾನ್, ಚಪಾತಿ ತಯಾರಿಸುವ ಯಂತ್ರದ ಜೊತೆಗೆ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗಾಗಿ ಟೆಂಡರ್ ಅನ್ನು ಕರೆಯದೇ ಕಮಿಷನ್ ಆಸೆಗಾಗಿ ತಮಗೆ ಬೇಕಾದ ಒಂದು ಕಂಪನಿಗೆ ಅವಕಾಶ ಮಾಡಿಕೊಟ್ಟು ಅವರಿಂದ ಕಳಪೆ ಗುಣಮಟ್ಟದ ಉಪಕರಣಗಳನ್ನು ತರಿಸಿದ್ದಾರೆ ಎಂದು ಇದೇ ವೇಳೆ ಆರೋಪಿಸಿದರು.
ಹಲ್ಲೆಯಿಂದ ಕೈಯನ್ನು ಕಳೆದುಕೊಂಡಿರುವ ಸಂತ್ರಸ್ತ ಅನೀಶ್ ಕುಮಾರ್, ಟ್ರಸ್ಟ್ ನ ಪದಾಧಿಕಾರಿ ಹರ್ಷ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.