ಪ್ರಜ್ವಲ್‌, ರೇವಣ್ಣ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ: ಪ್ರತಿಕೃತಿ ದಹನ

KannadaprabhaNewsNetwork |  
Published : May 07, 2024, 01:04 AM IST
ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರಜ್ವಲ್‌ ಅವರ ಪ್ರತಿಕೃತಿಯನ್ನು ದಹನ ಮಾಡಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಜೊತೆಗೆ ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದಾರೆ. ಜೊತೆಗೆ ಮಹಿಳೆಯರನ್ನು ಅಪಹರಿಸಿ ಬಚ್ಚಿಟ್ಟ ಪ್ರಕರಣ ಅವರ ಮೇಲಿದೆ ಹೀಗಾಗಿ ಅಪ್ಪ ಮಗನ ವಿರುದ್ಧ ಕೂಡಲೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಜ್ವಲ್ ಹಾಗೂ ರೇವಣ್ಣ ತಮ್ಮ ಅಧಿಕಾರವನ್ನು ದುರುಪ ಯೋಗಪಡಿಸಿಕೊಂಡು ಸಹಾಯ ಕೇಳಿಕೊಂಡು ಬಂದ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮಹಿಳೆಯರ ಅಸಹಾಯಕತೆಯೇ ಅಪ್ಪ ಮಕ್ಕಳಿಗೆ ಬಂಡವಾಳ. ಪ್ರಜ್ವಲ್ ಗೆ ಸಂಬಂಧಿಸಿದ 2900 ಕ್ಕೂ ಹೆಚ್ಚು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹೀಗಾಗಿ ಪ್ರಜ್ವಲ್ ವಿರುದ್ಧ ಕನಿಷ್ಠ 300 ಪ್ರಕರಣಗಳನ್ನಾದರೂ ದಾಖಲು ಮಾಡಬೇಕು. ಕೂಡಲೇ ಪ್ರಜ್ವಲ್ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರಜ್ವಲ್ ನನ್ನು ಸಂಸತ್ ಸ್ಥಾನದಿಂದ ಹಾಗೂ ರೇವಣ್ಣ ಅವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾ ಗೊಳಿಸಬೇಕು. ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆ ಮಹಿಳೆಯರಿಗೆ ಆರೋಪಿತರಿಂದಲೇ ಪರಿಹಾರ ಕೊಡಿಸ ಬೇಕು ಎಂದು ಒತ್ತಾಯಿಸಿದರು.ಸಮವಸ್ತ್ರ ಧರಿಸಿ ಲೈಂಗಿಕ ಕೃತ್ಯದಲ್ಲಿ ಭಾಗಿಯಾಗಿರುವ ಅಧಿಕಾರಿ ಯಾರು ಎಂಬುದನ್ನು ಪತ್ತೆ ಹಚ್ಚಿ ಅವರನ್ನು ಸೇವೆ ಯಿಂದಲೇ ವಜಾ ಗೊಳಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ದಲಿತಪರ ಸಂಘಟನೆಗಳ ಮುಖಂಡರಾದ ಮರ್ಲೆ ಅಣ್ಣಯ್ಯ, ಹುಣಸೆಮಕ್ಕಿ ಲಕ್ಷ್ಮಣ್, ಹೊನ್ನೇಶ್, ಉಮೇಶ್, ಕೂದುವಳ್ಳಿ ಮಂಜುನಾಥ್‌, ಮೋಹನ್‌ಕುಮಾರ್‌, ಕೋಟೆ ಜಗದೀಶ್, ಕಾಂಗ್ರೆಸ್ ಮುಖಂಡ ಎಚ್.ಎಚ್. ದೇವರಾಜ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 6 ಕೆಸಿಕೆಎಂ 3ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರಜ್ವಲ್‌ ಪ್ರತಿಕೃತಿ ದಹನ ಮಾಡಿದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್