ತನಿಖೆ ದಿಕ್ಕು ತಪ್ಪಿಸುವ ಶಾಸಕರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಕಿಡಿ

KannadaprabhaNewsNetwork |  
Published : Aug 21, 2025, 01:00 AM IST
ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ವಜಾ ಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಚಿಕ್ಕಮಗಳೂರಿನ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್, ಅಮಾಯಕರ ಸಾವಿನ ತನಿಖೆ ನಡೆಯುತ್ತಿರುವ ಧರ್ಮಸ್ಥಳದ ಪ್ರದೇಶದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರು ಸೇರಿ ಅನೇಕರು ಶಾಸಕರು ನ್ಯಾಯಬದ್ಧವಾಗಿ ತನಿಖೆ ನಡೆಸಲು ಅಡ್ಡಿಪಡಿಸುತ್ತಿದ್ದಾರೆ ಎಂದು ದೂರಿದರು.

ಸದಾ ಹಿಂದೂಗಳ ಪರವಾಗಿ ನಿಂತಿರುವ ಬಿಜೆಪಿ ಶಾಸಕರುಗಳು ಅಮಾಯಕ ಹಿಂದೂ ಹೆಣ್ಣು ಮ ಗಳಾದ ಸೌಜನ್ಯ ಕೊಲೆ ಪ್ರಕರಣವನ್ನು ಕೂಲಂಕುಷವಾಗಿ ನಡೆಸದೇ ಮತ್ತು ಸಾವಿಗೂ ನ್ಯಾಯವನ್ನು ಒದಗಿ ಸದೇ ನಕಲಿ ಹಿಂದುತ್ವವಾದಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂಬಂಧ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿರುವಾಗಲೇ ಸರ್ಕಾರದ ನಿಯೋಜಿತ ವಿಶೇಷ ತನಿಖೆ ತಂಡ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಪ್ರಕರಣವನ್ನು ದಿಕ್ಕು ತಪ್ಪಿಸಲು ಹೊರಟಿರುವ ಕೆಲವು ಶಾಸಕರ ನಡೆಯನ್ನು ಒಕ್ಕೂಟವು ತೀವ್ರ ಖಂಡಿಸುತ್ತದೆ ಎಂದರು.

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿಗಳು, ಪುರುಷರು ಸೇರಿದಂತೆ ಅಸಹಜ ಸಾವುಗಳನ್ನು ನೋಡಿದ್ದೇವೆ ಎಂದು ವ್ಯಕ್ತಿಯೊಬ್ಬರು ಹೇಳಿಕೆ ನೀಡಿರುತ್ತಾರೆ. ಈ ವಿಷಯಕ್ಕೆ ಸಂಬಂಧಿಸಿದ ರಾಜ್ಯ ದ ಮಾನವ ಪರ ಹೋರಾಟಗಾರರು, ನ್ಯಾಯವಾದಿಗಳು, ಯೂಟ್ಯೂಬರ್‌ಗಳು ಧ್ವನಿ ಎತ್ತಿದ ಕಾರಣದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿ ಎಸ್‌ಐಟಿಗೆ ತನಿಖೆ ವಹಿಸಲಾಗಿದೆ ಎಂದು ತಿಳಿಸಿದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಮಾತನಾಡಿ, ನೂರಾರು ಅಸಹಜ ಸಾವುಗಳ ಬಗ್ಗೆ ಹೂತಿರುವ ಸ್ಥಳಗಳನ್ನು ಗುರುತಿಸಿ ಅಗೆದು ಅಸ್ಥಿಪಂಜರ, ಮೂಳೆಗಳನ್ನು ಶೋಧಿಸುತ್ತಿರುವಾಗಲೇ ಕೆಲವು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಎಸ್‌ಐಟಿ ತನಿಖೆಯನ್ನು ನಿಲ್ಲಿಸಬೇಕು ಎಂದು ಹೇಳಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು.

ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಸುಳ್ಳು ಹೇಳಿಕೆ ನೀಡುವ ಶಾಸಕರ ನಡೆ ಖಂಡನೀಯ. ಅಲ್ಲದೇ ಎಸ್‌ಐಟಿ ತಂಡದವರನ್ನು ತನಿಖೆ ವರದಿ ಬಿಡುಗಡೆ ಮುನ್ನವೇ ಆರೋಪಿಸುವುದು ಕೊಲೆಗಾರರನ್ನು ರಕ್ಷಣೆ ಮಾಡಿದಂತೆ. ಜೊತೆಗೆ ಹಲವು ಅನುಮಾನ ಸಾರ್ವಜನಿಕರಲ್ಲಿ ಮೂಡಿಸುತ್ತಿದೆ ಎಂದರು.

ಒಕ್ಕೂಟದ ಮುಖಂಡರಾದ ಗೌಸ್‌ ಮುನೀರ್, ಉಮೇಶ್‌ಕುಮಾರ್, ಛಲವಾದಿ ರಘು, ಗೌಸ್ ಮೊಹಿಯುದ್ದೀನ್, ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ