ಕನ್ನಡಪ್ರಭ ವಾರ್ತೆ ಮಡಿಕೇರಿ
ದಲಿತರು, ಹಿಂದುಳಿದ ವರ್ಗ, ಕಡು ಬಡವರು, ದುರ್ಬಲರು ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸುತ್ತಿರುವ ಸಿದ್ದರಾಮಯ್ಯ ದಕ್ಷ ಆಡಳಿತ ಸಹಿಸದೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಪತನಗೊಳಿಸಬೇಕೆನ್ನುವ ಏಕೈಕ ಉದ್ದೇಶದಿಂದ ಆಧಾರ ರಹಿತ ಹಗರಣಗಳನ್ನು ಬೀದಿಗೆ ತರಲಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಆ ಮೂಲಕ ಜನರ ಹಾದಿ ತಪ್ಪಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಸಮಿತಿ ಪ್ರಮುಖರು ಆರೋಪಿಸಿದರು.
ಸಮಿತಿ ಜಿಲ್ಲಾ ಸಂಚಾಲಕ ಎಂ.ಎನ್.ರಾಜಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಎನ್.ಆರ್.ದೇವರಾಜ್, ಎಸ್.ಜೆ.ರಾಜಪ್ಪ, ಪ್ರಮುಖರಾದ ಶಿವಕುಮಾರ್, ದಯಾಕರ,ವೀರಭದ್ರ, ಗಿರೀಶ್, ಚಂದ್ರಶೇಖರ್, ರಂಗಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.