ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು:ಆರ್‌.ಬಿ. ತಿಮ್ಮಾಪೂರ

KannadaprabhaNewsNetwork |  
Published : Dec 25, 2025, 03:15 AM IST
ಜಮಖಂಡಿ ನಗರದ ಅಬುಬಕರ ದರ್ಗಾ ಮೈದಾನದಲ್ಲಿ ನಡೆದ ಕೌಮಿ ಏಕತಾ ಸಮಾಮೇಶವನ್ನು ಸಚಿವ ಜಾರಕಿಹೊಳಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು.ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ ಸಮಾನರಾಗಿ ಬಾಳುವೆ ನಡೆಸಬೇಕು.ಡಾ.ಅಂಬೇಡ್ಕರ್‌ ಅವರು ನೀಡಿರುವ ಮತದಾನ ಹಕ್ಕನ್ನು ಸರಿಯಾರಿ ಬಳಸಿಕೊಂಡು ನಮಗೆ ಬೇಕಾದ ನಾಯಕರನ್ನು ಆರಿಸಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಕರೆ ನೀಡಿದರು.

ನಗರದ ಅಬುಬಕರ ದರ್ಗಾ ಮೈದಾನದಲ್ಲಿ ಶಹೀದ್‌ ಹಜರತ್‌ ಟಪ್ಪು ಸುಲ್ತಾನ ಜಯಂತ್ಯುತ್ಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಕೌಮಿ ಏಕತಾ ಸಮಾಮೇಶ ಉದ್ದೇಶಿಸಿ ಮಾತನಾಡಿ, ಟಿಪ್ಪು ಸುಲ್ತಾನರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಆಗಿನ ಕಾಲದಲ್ಲೇ ರಾಕೆಟ್‌ಗಳನ್ನು ತಯಾರಿಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು. ಅನೇಕ ಮಠ, ಮಂದಿರ ನಿರ್ಮಿಸಿದ್ದರು. ನಾಣ್ಯಗಳನ್ನು ಚಲಾವಣೆಗೆ ತಂದಿದ್ದರು. ಸ್ವಾರ್ಥಕ್ಕಾಗಿ ದೇಶವನ್ನು ಗಟ್ಟಿಯಾಗಿ ಕಟ್ಟಲು ಶ್ರಮಿಸಿದ ಟಿಪ್ಪು ಸುಲ್ತಾನರ ಇತಿಹಾಸ ತಿರುಚುವ ಕೆಲಸ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ ನರೇಗಾ ಯೋಜನೆಯಲ್ಲಿದ್ದ ಮಹತ್ಮ ಗಾಂಧಿ ಅವರ ಹೆಸರನ್ನು ತೆಗೆಯುವ ಕೆಲಸ ಮಾಡಿದ್ದಾರೆ. ಆದರೆ ದೇಶದ ಜನರ ಮನಸ್ಸಿನಲ್ಲಿರುವ ಅವರ ಚಿಂತನೆ ತೆಗೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ದೇಶವನ್ನು ಸರ್ವಜನಾಂಗದ ಶಾಂತಿಯ ತೊಟ ಮಾಡಲು ಶ್ರಮಿಸುತ್ತಿದೆ, ಯಾರೂ ಭಯ ಪಡುವ ಅಗತ್ಯವಿಲ್ಲ ಎಂದರು.

ಸಮಿತಿ ಅಧ್ಯಕ್ಷ ನಜೀರ್‌ ಕಂಗನೊಳ್ಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಡಾ. ತೌಫಿಕ್‌ ಪಾರ್ಥನಳ್ಳಿ ಮಾನಾಡಿದರು. ಬಿಹಾರದ ಮೌಲಾನಾ ಅಬ್ದುಲ್ಲಾಸಾಲೀಂಕಮರ ಚತುರ್ವೇದಿ, ಉತ್ತರ ಪ್ರದೇಶದ ಹಜರತ್‌ ಪೀರ್‌ ಸೈಯದ್‌ ಕಾಸಿಂ ಅಶ್ರಫ್‌, ಬಾಗಲಕೊಟೆಯ ಹಜರತ ಮೌಲಾನಾ ಮೊಹಸೀನ್‌ಅಹಮದ್‌, ಕಾರಿ ಸಮಿಉಲ್ಲಾ ಖಾದ್ರಿ ಮಾನತಾಡಿದರು. ಎಐಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಲತೀಫ್‌ ಖಾನ ಪಠಾಣ, ಓಲೆಮಠದ ಆನಂದ ದೇವರು, ರುದ್ರಾವಧೂತ ಮಠದ ಸಹಜಾನಂದ ಶ್ರೀಗಳು, ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ರಾಹುಲ್‌ ಕಲೂತಿ, ಸುಶೀಲ ಕುಮಾರ ಬೆಳಗಲಿ, ಡಾ. ರಾಜು ಗಸ್ತಿ, ರಿಯಾಜ ಅವಟಿ, ರಫಿಕ್‌ ಬಾರಿಗಡ್ಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅನ್ವರ್‌ ಮೋಮಿನ್‌, ಈಶ್ವರ ವಾಳೆಣ್ಣವರ, ಕಾರ್ಯದರ್ಶಿ ಸಮೀರ್‌ ಇಲಾಹಿ ಕಂಗನೊಳ್ಳಿ, ಖಜಾಂಚಿ ಅಲ್ತಾಫ್‌ ಸಗರ, ಅಬ್ದುಲ್‌ಸಾಬ ಜಮಾದಾರ, ಅಬುಬಕರ ಕುಡಚಿ ಸೇರಿದಂತೆ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರು ವೇದಿಕೆಯಲ್ಲಿದ್ದರು.ದಲಿತರು, ಓಬಿಸಿಗಳು, ಮುಸ್ಲಿಮರು ಸೇರಿ ಶೇ.97 ಜನರಿದ್ದರೂ ಅಧಿಕಾರ ನಮ್ಮ ಬಳಿ ಇಲ್ಲವಾಗಿದೆ. ಅತ್ಯಂತ ಕಡಿಮೆ ಜನ ಸಂಖ್ಯೆಯ ಜನರು ನಮ್ಮನ್ನು ಆಳುತ್ತಿದ್ದಾರೆ. ಎಲ್ಲ ಹಿಂದುಳಿದ ಸಮಾಜಗಳು ಒಗ್ಗಟ್ಟಾಗಬೇಕು. ದೇಶವನ್ನು ಹಾಳು ಮಾಡಲು ಹೊರಟಿರುವ ಅಧಿಕಾರದಲ್ಲಿರುವವರ ವಿರುದ್ಧ ಒಗ್ಗಟ್ಟಾಗಬೇಕು. ಇವರನ್ನು ಯಹೂದಿಗಳು ಎಂದು ಸಂಬೋಧಿಸುತ್ತೇನೆ ಎಂದ ಅವರು, ರಾಜ್ಯದಲ್ಲಿ ಕೋಟಿ ಜನರಿರುವ ಮುಸ್ಲಿಮ ಸಮುದಾಯದ 30 ಶಾಸಕರಿರಬೇಕಿತ್ತು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನರ ಹೆಸರಿಡಬೇಕು. ನಟ ಶಾರೂಖ್‌ ಖಾನ್‌ ಟಿಪ್ಪು ಸುಲ್ತಾನರ ಸಿನಿಮಾ ಮಾಡಬೇಕು.

- ಮಹೇಶ್ವರಾನಂದ ಸ್ವಾಮೀಜಿ ಅಲ್ಲಮಪ್ರಭು ಅಹಿಂದ ಪೀಠ ಹಾವೇರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ